ಶಿವಮೊಗ್ಗ, ಸೆಪ್ಟಂಬರ್. 17 ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧÀ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಸಕಾಲಿಕವಾಗಿ ಮಾಹಿತಿ ನೀಡದ ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಅವರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ, ಬಾಲ್ಯವಿವಾಹ, ಬಾಲ ನ್ಯಾಯ ಮಂಡಳಿಯಲ್ಲಿ ದಾಖಲಾಗುವ ಪ್ರಕರಣಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಂಪೂರ್ಣ ವಿವರ ಹೊಂದಿರಬೇಕು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾ¯ಕಾಲಕ್ಕೆ ಆಗಿರುವ ಬೆಳವಣಿಗೆ, ಬದಲಾವಣೆಗಳ ಕುರಿತು ಮಾಹಿತಿ ತಿಳಿದಿರಬೇಕೆಂದವರು ನುಡಿದರು.
ಬಾಲ್ಯವಿವಾಹಕ್ಕೆ ಸಂಬಂಧಿಸಿದಂತಹ ಪ್ರಕರಣಗಳು ಕಂಡುಬಂದಾಗ ದಿಡೀರ್ದಾಳಿ ಮಾಡಬೇಕಾದ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳಿಗೆ ಸದಾ ತಯಾರಾಗಿರುವಂತೆ ಲಿಖಿತ ಮಾಹಿತಿ ನೀಡಲು ಸೂಚಿಸಿದ ಅವರು, ಪ್ರಕರಣ ಘಟಿಸಿದ ವ್ಯಾಪ್ತಿಯ ಪ್ರದೇಶದಲ್ಲಿ ಸಮೀಪದಲ್ಲಿರುವ ಹಾಗೂ ವಿಷಯ ತಿಳಿದಿರುವ ಪಂಚಾಯಿತಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಸಕಾಲದಲ್ಲಿ ಸಂಬಂಧಿಸಿದವರಿಗೆ ಮಾಹಿತಿ ನೀಡಿ, ಬಾಲ್ಯವಿವಾಹದಂತಹ ಪ್ರಕರಣಗಳು ಜಿಲ್ಲೆಯಲ್ಲಿ ನಡೆಯದಂತೆ ಗಮನಿಸಲು ಸೂಚಿಸಿದರು.
ಶಿಶು ಅಭಿವೃದ್ಧಿ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ನಿರೀಕ್ಷಿತ ಗುರಿ ಸಾಧನೆಯಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ನಿಕಟ ಸಂಪರ್ಕ ಹೊಂದಿರುವ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕೆ ಮುಂದಾಗುವಂತೆ ಅವರು ಸೂಚಿಸಿದರು.
ಇಲಾಖೆಯಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಯಲ್ಲಿರುವ ಉದ್ಯೋಗಿನಿ ಯೋಜನೆಯ ಫಲಾನುಭವಿಗಳನ್ನು ಅಕ್ಟೋಬರ್ ಮೊದಲವಾರದಲ್ಲಿ ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸಿ, ಆಯ್ಕೆಪಟ್ಟಿಯನ್ನು ಪ್ರಕಟಿಸುವಂತೆ ಸೂಚಿಸಿದ ಅವರು, ಮಹಿಳೆಯರ ವಿಕಾಸಕ್ಕಾಗಿ ಇರುವ ಸಮೃದ್ಧಿ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಯರಿತು ಕಾರ್ಯನಿರ್ವಹಿಸುವಂತೆ ಹಾಗೂ ಗುರಿಮೀರಿದ ಸಾಧನೆಗೆ ಶ್ರಮಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಡಾ||ನಟರಾಜ್, ಶ್ರೀಮತಿ ಗಂಗಾಬಾಯಿ, ಸುರೇಶ್ ಸೇರಿದಂತೆ ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.