ಶಿವಮೊಗ್ಗ, ಆಗಸ್ಟ್ 07: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು(ಡಿ.ಎಸ್.ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಟಾನಗೊಳಿಸುತ್ತಿದೆ.
2021-22 ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 06 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್‍ಗಾಗಿ http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.