ಶಿವಮೊಗ್ಗ: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲದೇ ಹೋದರೂ ಬಿಜೆಪಿ ಸರ್ಕಾರದ ವಿರುದ್ಧ ಚುನಾವಣಾ ಪ್ರಚಾರದಲ್ಲಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಪಕ್ಷದ ಸಂಘಟನೆ ಹಾಗೂ ಗೆಲುವಿಗೆ ನಿರಂತರ ಶ್ರಮಿಸಿದ್ದಾರೆ. ಆದ್ದರಿಂದ ದಿನೇಶ್ ಗುಂಡೂರಾವ್ ಅವರ ರಾಜಿನಾಮೆಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಬಾರದು ಎಂದು ಮನವಿ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ರಾಜಿನಾಮೆಯನ್ನು ದಿನೇಶ್ ಗುಂಡೂರಾವ್ ಅವರು ಕೂಡಲೇ ಹಿಂಪಡೆಯಬೇಕು. ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಶ್ರಮಿಸಿದ ಕಾರ್ಯವೈಖರಿ ಅಪಾರವಾಗಿದೆ. ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ಶಕ್ತಿ ತುಂಬಲು ದಿನೇಶ್ ಗುಂಡೂರಾವ್ ನಾಯಕತ್ವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷರ ಮೇಲೆ ಹೊರಿಸುವುದು ಸರಿಯಲ್ಲ. ಅನರ್ಹರ ಗೆಲುವಿಗೆ ಹಣಬಲ ಸೇರಿದಂತೆ ಅನೇಕ ಕಾರಣಗಳಿವೆ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದಡಿ ಕೆಲಸ ಮಾಡುತ್ತದೆ. ಆದ್ದರಿಂದ ರಾಜಿನಾಮೆ ಪತ್ರ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ಸಂಪೂರ್ಣ ದಿನೇಶ್ ಅವರಿಗಿದೆ. ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಇತರೆ ಜಿಲ್ಲೆಗಳಿಂದಲೂ ಬೆಂಬಲ ಸೂಚಿಸಿ ಪತ್ರ ರವಾನಿಸಲಾಗಿದೆ. ದಿನೇಶ್ ಗುಂಡೂರಾವ್ ಅವರು ತಮ್ಮ ನಿರ್ಧಾರ ಬದಲಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ಸುಂದರೇಶ್ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮನವಿ ಮಾಡಿದ್ದಾರೆ

error: Content is protected !!