News Next

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು/ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯುವುದಕ್ಕಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದೆ.
ನಿಗಧಿತ ನಮೂನೆಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಮಾಸಾಶನಕ್ಕೆ ಸಂಬಂಧಿಸಿದ ಪಿಂಚಣಿ ಪಾವತಿ ಆದೇಶದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪ.ಜಾ/ಪ.ಪಂ. ಕಲಾವಿದರು ಕಡ್ಡಾಯವಾಗಿ ಆರ್.ಡಿ. ಸಂಖ್ಯೆ ಇರುವ ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರವನ್ನು ಲಗತ್ತಿಸಿ ಜೂನ್ 06ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕುವೆಂಪು ರಂಗಮಂದಿರ, ಶಿವಮೊಗ್ಗ, ದೂ.ಸಂ.: 08182-223354 ನ್ನು ಸಂಪರ್ಕಿಸುವುದು.

error: Content is protected !!