ಶಿವಮೊಗ್ಗ: ಅಕ್ಟೋಬರ್ 15 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿವಮೊಗ್ಗ ತಾಲೂಕು ಮಟ್ಟದಲ್ಲಿ ಪ್ರತಿಭಾವಂತ ಮಕ್ಕಳಿಗೆ ಅ. 23 ರಂದು ನಗರದ ಬಸವನಗುಡಿಯ 1ನೇ ತಿರುವು, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಆವರಣದಲ್ಲಿ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ಶಿಬಿರದಲ್ಲಿ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಕಲೆ ಮತ್ತು ವಿಜ್ಞಾನದಲ್ಲಿ ಹೊಸ ಅವಿಷ್ಕಾರ ಎಂಬ 4 ಕ್ಷೇತ್ರಗಳಲ್ಲಿ ಆಯ್ಕೆ ಶಿಬಿರ ನಡೆಯಲಿದೆ.
ಆಸಕ್ತ ಮಕ್ಕಳು ನಿಗಧಿತ ನಮೂನೆ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅ.21 ರಿಂದ ಪಡೆದು ಭರ್ತಿ ಮಾಡಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222775 ನ್ನು ಸಂಪರ್ಕಿಸುವಂತೆ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!