.
ಪರಿಸರಕ್ಕೆ ಮಾರಕವಾಗುವ ಅಭಿವೃದ್ಧಿ ಕಾರ್ಯಗಳಿಗೆ ಪಿಐಎಲ್ ಕಡಿವಾಣ
ಶಂಕರಘಟ್ಟ, ಆ.29: ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಗೂ ಜನರಿಗೆ ಮಾರಕವಾಗುವ ಯಾವುದೇ ರೀತಿಯ ಚಟುವಟಿಕೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕಲ್ಪಿಸಿದೆ. ಜನಸಾಮಾನ್ಯರಿಗೆ ನೀಡಿರುವ ಈ ವಿಶೇಷ ಅಧಿಕಾರ ಎಗ್ಗಿಲ್ಲದ ಅಭಿವೃದ್ಧಿ ಕಾರ್ಯಗಳಿಗೆ ಕಡಿವಾಣವಾಗಬಲ್ಲದು ಎಂದು ಬೆಂಗಳೂರಿನ ಕರ್ನಾಟಕ ಪರಿಸರ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ. ನವೀನ್ ದಾನೇಶ್ ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ ಪರಿಸರ ಅಧ್ಯಯನ ವಿಭಾಗ ಸೋಮವಾರ ವಿಭಾಗದ ಸಭಾಂಗಣದಲ್ಲಿ ಪರಿಸರ ಮತ್ತು ಸಾರ್ವಜನಿಕ ಹಿತಾಸಕ್ತಿ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಸಾರ್ವಜನಿಕ ಹಿತಾಸಕ್ತಿಯ ದಾವೆ ಹೂಡುವ ಮೂಲಕ ಪರಿಸರಕ್ಕೆ ಹಾಗೂ ಜನಸಾಮಾನ್ಯರಿಗೆ ವ್ಯತಿರಿಕ್ತ ಪರಿಣಾಮ ಬೀರುವ ಚಟುವಟಿಕೆಗಳನ್ನು ತಡೆದಿರುವ ನೂರಾರು ಉದಾಹರಣೆಗಳಿವೆ. ಹಾಗೆಯೇ ಈ ವಿಶೇಷ ಅಧಿಕಾರ ಕೆಲವೊಮ್ಮೆ ದುರುಪಯೋಗವಾಗಿರುವುದೂಉಂಟು. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಕಾಯಲು ಪ್ರಾಮಾಣಿಕತೆ ಅತ್ಯಂತ ಅವಶ್ಯಕ. ಇಲ್ಲದಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿ ದೇಶದ ಆರ್ಥಿಕತೆಗೆ ಹೊಡೆತ ಬೀಳುತ್ತದೆ ಎಂದರು.
ವಿಭಾಗದ ಮುಖ್ಯಸ್ಥ ಪ್ರೊ. ಯೋಗೇಂದ್ರ. ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಭಾಗದ ಉಪನ್ಯಾಸಕರು, ಸಂಶೋಧನಾರ್ಥಿಗಳು, ಮತ್ತು ಭಾಗವಹಿಸಿದ್ದರು.