ಶಿವಮೊಗ್ಗ ನವೆಂಬರ್ 09 : ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ 2022 ರ ಅಂಗವಾಗಿ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ನ.7 ರಂದು ಸಪ್ತಾಹದ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಿ, ನಂತರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.
ಈ ವೇಳೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎನ್ ಮೃತ್ಯುಂಜಯರವರು ಮಾತನಾಡಿ, ಸಾರ್ವಜನಿಕ ಆಡಳಿತ ಕ್ಷೇತ್ರದಲ್ಲಿ ಸಾರ್ವಜನಿಕರ ಅಧಿಕೃತ ಕೆಲಸವನ್ನು ವಿಳಂಬ ಮಾಡದೇ ವಿಲೆ ಮಾಡಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು. ಭ್ರಷ್ಟಾಚಾರ ಹಾಗೂ ನಿಷ್ಪಕ್ಷಪಾತ ಮಾಡದೇ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದ ಅವರು ಸಾರ್ವಜನಿಕ ಜೀವನದಲ್ಲಿ ಸರಳತೆಯನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಯಾವುದೇ ಅಧಿಕಾರಿ, ಸಿಬ್ಬಂದಿಯವರು ನಿಯಮ ಮತ್ತು ಕಾನೂನನ್ನು ಉಲ್ಲಂಘಿಸಿದರೆ ಅಥವಾ ಅವರ ವಿರುದ್ದ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚಿವರಾದ ಅನುರಾಧ, ವಿದ್ಯಾರ್ಥಿಗಳು ಹಾಜರಿದ್ದರು.