ಶಂಕರಘಟ್ಟ, ಸೆ. 15: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕುವೆಂಪು ವಿವಿಯಲ್ಲಿ ಇಂದು ನಡೆದ ಸಂವಿಧಾನ ಓದು ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಳಿಗ್ಗೆ ಹತ್ತು ಗಂಟೆಗೆ ಸರ್ಕಾರ ನಿಗದಿಪಡಿಸಿದ ಸಮಯಕ್ಕೆ ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕೋತ್ತರ ವಿಭಾಗಗಳಲ್ಲಿ ಏಕಕಾಲದಲ್ಲಿ ಸಂವಿಧಾನದ ಪೀಠಿಕೆಯನ್ನು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಓದಿದರು.

ಇದಲ್ಲದೆ, ಬಸವ ಸಭಾ ಭವನದಲ್ಲಿ ಸುಮಾರು 1000 ವಿದ್ಯಾರ್ಥಿಗಳು, ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ 250 ಮಂದಿ ಸಂವಿಧಾನ ಪ್ರಸ್ತಾವನೆ ಓದಿಗೆ ಸಾಕ್ಷಿಯಾದರು.

ಕುಲಪತಿ ಪ್ರೊ. ಎಸ್. ವೆಂಕಟೇಶ್, ಪರೀಕ್ಷಾಂಗ ಕುಲಸಚಿವ ಪ್ರೊ. ಗೋಪಿನಾಥ್, ಡಾ. ನೆಲ್ಲಿಕಟ್ಟೆ ಸಿದ್ದೇಶ್, ವಿವಿಯ ಇತರ ಅಧಿಕಾರಿಗಳು ಆಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯ ಪ್ರತಿಜ್ಞೆ ಸ್ವೀಕರಿಸಿದರು.

error: Content is protected !!