News Next

ಶಿವಮೊಗ್ಗ, ಜುಲೈ 15 : ಶಿವಮೊಗ್ಗ ತಾಲೂಕು ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಗೊಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಗ್ರಾಮಗಳಲ್ಲಿನ ಪ.ಜಾ/ಪ.ಪಂ.ಗಳಿಗೆ ಸೇರುವ ರೈತರು ಎಸ್.ಸಿ.ಪಿ.ಹಾಗೂ ಟಿ.ಎಸ್.ಪಿ. ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಕರ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ರೈತರು ನಿಗಧಿತ ನಮೂನೆ ಅರ್ಜಿಯನ್ನು ಮೆಸ್ಕಾಂ ಗ್ರಾ.ಉ.ವಿ.ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿತ ಪೂರ್ಣ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 13ರೊಳಗಾಗಿ ಸಲ್ಲಿಸುವುದು.
ನಿಗಧಿಪಡಿಸಿದ ದಿನಾಂಕದೊಲಗೆ ಮೆಸ್ಕಾಂ ನಿಗಮ ತಾಂತ್ರಿಕ ಕಾರ್ಯಸಾಧ್ಯತೆ ಪರಿಶೀಲಿಸಿ ಹಾಗು ಸಮಾಜ ಕಲ್ಯಾಣ ಇಲಾಖೆಯ ಅನುಮೋದನೆಯ ನಂತರ ಆದ್ಯತೆ ಮೇರೆಗೆ ವಿದ್ಯುತ್ ಸೌಲಭ್ಯ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೆಸ್ಕಾಂ ಪಾ&ನಿ.ಗ್ರಾ.ಉವಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!