ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಸ್ವಾಮ್ಯತೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈ ಯೋಜನೆ ಅತ್ಯಂತ ಫಲಪ್ರದವಾಗಿದೆ. ಜಿಲ್ಲೆಯಲ್ಲಿ ಹರಿಯುವ ಪ್ರಮುಖ ನದಿಗಳಾದ ತುಂಗಾ, ಭದ್ರಾ, ಶರಾವತಿ ನೀರನ್ನು ಬಳಸಿಕೊಂಡು ಪೈಪ್ಲೈನ್ ಹಾಯಿಸಿ ಶುದ್ಧ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರಿಗೆ ಗ್ರಾಮಗಳಲ್ಲಿ ಕುಡಿಯುವ ನೀರನ್ನು ನೀಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ಎಲ್ಲ ಗ್ರಾಮಗಳಿಗೂ ಕುಡಿಯುವ ಪೂರೈಸುವ ಉದ್ದೇಶದಿಂದ 12 ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 7 ಯೋಜನೆ ಪೂರ್ಣಗೊಂಡಿದ್ದು, 207 ಗ್ರಾಮಗಳನ್ನು ಗುರುತಿಸಿ ಯೋಜನೆ ಲಾಭ ಸಿಗುವಂತೆ ಕಾರ್ಯಚಟುವಟಿಕೆ ರೂಪಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದಿಂದ ಮಹತ್ತರ ಯೋಜನೆ ಅನುಷ್ಠಾನಗೊಳ್ಳುತ್ತಿದೆ.
ಬಹುದೂರದಿಂದ ಎಂದರೆ ಶರಾವತಿ ಹಿನ್ನೀರನ್ನು ಸುಮಾರು 50 ಕೀಮಿ ದೂರದ ಕಾರ್ಗಲ್ನಿಂದ ಸಾಗರಕ್ಕೆ ಕುಡಿಯುವ ನೀರು ತರಲಾಗುತ್ತಿದೆ. ಮಾರ್ಗಮಧ್ಯೆ ಬರುವ 28 ಹಳ್ಳಿಗಳಿಗೆ ಯೋಜನೆಯ ಲಾಭ ಸಿಗಲಿದೆ. ಪ್ರತಿಯೊಬ್ಬ ಮನುಷ್ಯನಿಗೂ ಸ್ವಚ್ಛ ಕುಡಿಯುವ ನೀರು ಸಿಗಬೇಕು ಎನ್ನುವ ಆಶಯದಿಂದ ಯೋಜನೆ ಕಾರ್ಯಗತವಾಗುತ್ತಿದೆ. ಅದರಲ್ಲಿಯೂ ಕಂದಾಯ ಗ್ರಾಮಗಳಾಗದೇ ಇರುವ ಮಜರೆಗಳಿಗೂ ಕುಡಿಯುವ ನೀರು ದೊರಕುತ್ತಿದೆ. ಬೆಟ್ಟಗುಡ್ಡಗಳಿಂದ ಕೂಡಿರುವ ಪ್ರದೇಶಗಳಿಗೂ ಕುಡಿಯುವ ನೀರು ಸರಬರಾಜಾಗುತ್ತಿರುವುದು ಯೋಜನೆ ವಿಶೇಷವಾಗಿದೆ.
ನ್ಯೂಸ್ ನೆಕ್ಷ್ಟ್ ಮಾಧ್ಯಮದೊಂದಿಗೆ ಮಾತನಾಡಿದ ಎಂ.ಎಲ್.ವೈಶಾಲಿ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಒಟ್ಟು 207 ಗ್ರಾಮಗಳಿಗೆ ಯೋಜನೆಯಿಂದ ಅನುಕೂಲವಾಗಲಿದೆ. 189 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ವಿನಿಯೋಗಿಸಲಾಗಿದೆ. ಎಂದು ಹೇಳಿದರು.
ನ್ಯೂಸ್ ನೆಕ್ಷ್ಟ್ ಮಾಧ್ಯಮದೊಂದಿಗೆ ಮಾತನಾಡಿದ ಕೆ.ಬಿ.ಗಂಗಾಧರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯವ ನೀರಿಗೆ ಯಾವುದೇ ಸಮಸ್ಯೆ ಆಗದಿರಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದೆ. ಸಂಪರ್ಕವಿಲ್ಲದ ಗ್ರಾಮಗಳನ್ನು ಗುರುತಿಸಿ ಒಂದು ಕಡೆ ಕೇಂದ್ರಿಕೃತಗೊಳಿಸಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಯೋಜನೆಯು ಯಶಸ್ವಿಯಾಗಿ ಸಾಗುತ್ತಿದೆ.
ನ್ಯೂಸ್ ನೆಕ್ಷ್ಟ್ ಮಾಧ್ಯಮದೊಂದಿಗೆ ಮಾತನಾಡಿದ ನಾಗರತ್ನ, ಮತ್ತೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಂಡಿರುವುದರಿಂದ ಈ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲವಾಗಿದೆ. ಗ್ರಾಮದ ಸಾವಿರಾರು ಜನರಿಗೆ ಯೋಜನೆಯ ಪ್ರಯೋಜನ ದೊರಕುತ್ತಿದೆ.
ನ್ಯೂಸ್ ನೆಕ್ಷ್ಟ್ ಮಾಧ್ಯಮದೊಂದಿಗೆ ಮಾತನಾಡಿದ ಹರೀಶ್, ಗ್ರಾಮಸ್ಥ ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಇದೀಗ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾರ್ಯಗತವಾದ ಮೇಲೆ ಶುದ್ಧ ಕುಡಿಯುವ ನೀರು ವ್ಯವಸ್ಥಿತವಾಗಿ ಸರಬರಾಜಾಗುತ್ತಿದೆ.
ನ್ಯೂಸ್ ನೆಕ್ಷ್ಟ್ ಮಾಧ್ಯಮದೊಂದಿಗೆ ಮಾತನಾಡಿದ ಮೂರ್ತಿ, ಸಂತೆಕಡೂರು ಶಿವಮೊಗ್ಗ ತಾಲೂಕಿನ ಸಂತೆಕಡೂರು ಗ್ರಾಮದ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದೆ. ಕುಡಿಯುವ ನೀರನ್ನು ಬಹುದೂರದಿಂದ ತರಬೇಕಿತ್ತು. ಈಗ ನಮ್ಮ ಬಡಾವಣೆಗಳಲ್ಲಿ ನೀರು ಲಭ್ಯವಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಧ್ಯೇಯವಾಕ್ಯದ ಪ್ರತಿಯೊಬ್ಬ ನಾಗರೀಕನಿಗೂ ಶುದ್ಧ ಕುಡಿಯುವ ನೀರು ನೀಡಬೇಕು ಎನ್ನುವುದು ಯೋಜನೆ ಆಶಯ. ಅದರಂತೆ ಬಹುಗ್ರಾಮ ಕುಡಿಯುವ ನೀರು ಯೋಜನೆ ರೂಪಿಸಲಾಗಿದೆ. ಇಂತಹ ಮಹತ್ತರ ಯೋಜನೆ ಶಿವಮೊಗ್ಗದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ.