ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಮೇಲಿನಹನಸವಾಡಿ ಗ್ರಾಮದ ತುಂಗಾ ಫ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ 2022ನೇ ಸಾಲಿನ ಕನ್ನಡ ರಾಜ್ಯೋತ್ಸವದ ಅಂಗವಾಗಿ ” ಕೋಟಿ ಕಂಠ ಗಾಯನ ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ಭಾಗವಹಿಸಿ. “ನಾಡಗೀತೆ, ಉದಯವಾಗಲಿ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ ಹಾಗೂ ಹುಟ್ಟಿದರೆ ಕನ್ನಡನಾಡಲ್ಲಿ ಹುಟ್ಟ ಬೇಕು, ಗೀತೆಗಳನ್ನು ಹಾಡಲಾಯಿತು.
ಈ ಸಂದರ್ಭದಲ್ಲಿ ರತ್ನಾಕರ ಶೆಣೈ ರವರು ಶಿವಮೊಗ್ಗ ಗ್ರಾಮಾಂತರ ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷರು, ಜಿ.ಇ.ವಿರೂಪಾಕ್ಷಪ್ಪ ನವರು ಮಾಮ್ ಕೋಸ್ ನಿರ್ದೇಶಕರು, ಪಾಲಾಕ್ಷಿ, ಕೆ.ಇ. ಬಸವರಾಜಪ್ಪ ಮುಖ್ಯೋಪಾಧ್ಯಾಯರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.