News Next

ಗೃಹ ದಿಗ್ಬಂಧನ (ಹೋಂ ಕ್ವಾರಂಟೈನ್) ನಿಯಮ ಉಲ್ಲಂಘನೆಯಿಂದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬರುತ್ತಿರುವುದರಿಂದ ಈ ಕುರಿತು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶಕನಗಳನ್ನು ಪಾಲಿಸದೇ ಇದ್ದವರ ಮೇಲೆ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಇತರೆ ರಾಜ್ಯಗಳಿಂದ ಆಗಮಿಸುವವರನ್ನು ಸರ್ಕಾರದ ನಿರ್ದೇಶನದಂತೆ 14 ದಿನಗಳ ಗೃಹದಿಗ್ಬಂಧನದಲ್ಲಿ ಇರಿಸಿ ಅವರ ಮನೆಗಳನ್ನು ಸೀಲ್‍ಡೌನ್ ಮಾಡಲಾಗುತ್ತಿದೆ. ಗೃಹ ದಿಗ್ಬಂಧನದಲ್ಲಿ ಇರಿಸಿದ ವ್ಯಕ್ತಿಗಳು ಯಾವುದೇ ಕಾರಣಕ್ಕೂ ದಿಗ್ಬಂಧನ ನಿಯಮಗಳನ್ನು ಉಲ್ಲಂಘಿಸಿ ನಿಗಧಿತ ಅವಧಿಯಲ್ಲಿ ಮನೆಯಿಂದ ಹೊರಬಂದರೆ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ.
ಗೃಹ ದಿಗ್ಬಂಧನ ಉಲ್ಲಂಘನೆ ಪ್ರಕರಣಗಳಲ್ಲಿ ಮೊದಲ ಬಾರಿ ಎಚ್ಚರಿಕೆ ನೀಡಲಾಗುವುದು, 2ನೇ ಬಾರಿ ಉಲ್ಲಂಘನೆಗೆ ಎಫ್‍ಐಆರ್ ದಾಖಲಿಸಲಾಗುವುದು ಮತ್ತು ಗೃಹ ದಿಗ್ಬಂಧನದಿಂದ ಸಾಂಸ್ಥಿಕ ದಿಗ್ಬಂಧನಕ್ಕೆ ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

error: Content is protected !!