ಇಂದು ಸಾಗರದ ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಶಾಸಕರ ನೂತನ ಕಛೇರಿಯನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕರ ಗೋಪಾಲಕೃಷ್ಣ ಬೇಳೂರವರು ಮತ್ತು ಹಿರಿಯರು, ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪನವರು ಉದ್ಘಾಟಿಸಿದರು ಹಾಗೂ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕ್ಷೇತ್ರದ ಜನರ ಸಮಸ್ಯೆಗಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕರ ನೂತನ ಕಚೇರಿ ಪ್ರಾರಂಭಿಸಲಾಗಿದ್ದು ಜನಸಾಮಾನ್ಯರು ಯಾವುದೇ ಸಾರ್ವಜನಿಕ ಸಮಸ್ಯೆಗಳಿದ್ದರು ಈ ಕಛೇರಿಗೆ ಬಂದು ಅರ್ಜಿ ಸಲ್ಲಿಸಿ ಆ ಅರ್ಜಿಯನ್ನ ಸ್ವತಃ ಶಾಸಕರೇ ಪರಿಶಿಲಿಸಿ ಪರಿಹಾರ ಒದಗಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಕಾರ್ಯಕರ್ತರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಸಾಮಾನ್ಯರು ಉಪಸ್ಥಿತರಿದ್ದರು.