ಶಿವಮೊಗ್ಗ ಜನವರಿ-07 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಜ.26 ರಿಂದ ಫೆ. 26ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ- ಖಾದಿ ಉತ್ಸವ-2023ರಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಸಿಬಿಸಿ, ಪಿಬಿಎಸ್, ಪಿಎಂಇಜಿಪಿ, ಸಿಎಂಇಜಿಪಿ ಯೋಜನೆಯ ಸರ್ಕಾರದಿಂದ ಅನುದಾನ ಪಡೆದ ಅರ್ಹ ಫಲಾನುಭವಿಗಳು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಕಚೇರಿಯಿಂದ ಧನಸಹಾಯ ಪಡೆದಿರುವ ಬಗ್ಗೆ ದೃಢೀಕರಣವನ್ನು ಪಡೆದುಕೊಂಡು ವೆಬ್‍ಸೈಟ್ www.khadi.karnataka.gov.in ರಲ್ಲಿ ಜ.21ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಮಳಿಗೆ ಬಾಡಿಗೆಯು ಒಂದಕ್ಕೆ ರೂ. 35,400/- ಹಾಗೂ ಅರ್ಜಿ ಶುಲ್ಕ ರೂ. 500/- ಗಳನ್ನು ನಿಗದಿಪಡಿಸಿದ್ದು, ಆನ್‍ಲೈನ್ ಮೂಲಕ ಪಾವತಿಸುವುದು.
ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತರು ಕೆ. ಗೋವಿಂದಪ್ಪ, ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ಶಿವಮೊಗ್ಗ, ದೂ.ಸಂ.: 9480825637/ 08182-223273 ರವರನ್ನು ಸಂಪರ್ಕಿಸುವುದು.
—————–