ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ 2018 ಜನವರಿ 1 ರಿಂದ ಜಾರಿಗೆ ಬಂದಿರುತ್ತದೆ. ಸರಕಾರಿ ನೌಕರರಾಗಿರುವ ಮಹಿಳೆಯರನ್ನು ಹೊರತುಪಡಿಸಿ ಮೊದಲ ಬಾರಿ ಗರ್ಭಿಣಿಯರಾಗುವ ಪ್ರತಿಯೊಬ್ಬರೂ ಇದರ ಪ್ರಯೋಜನವನ್ನು ಪಡೆಯಬಹುದು.
ಈ ಯೋಜನೆಯಡಿ ಅರ್ಹ ಫಲಾನುಭವಿಯ ಬ್ಯಾಂಕ್ ಖಾತೆಗೆ ರೂ 5000 ಹಣವನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ಪ್ರಸ್ತುತ 2019ಜುಲೈ 1 ರಿಂದ ಅರ್ಜಿ ಸಲ್ಲಿಸಲು ಬಾಕಿ ಇರುವ ಗರ್ಭಿಣಿ ಮಹಿಳೆಯರು ಕೂಡಾ ಈಗ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿ ಅವಶ್ಯಕತೆ ಇಲ್ಲ. ಆದಾಯ ಮಿತಿ ಇಲ್ಲ. ಎಲ್ಲಾ ಗರ್ಭಿಣಿಯರು ಈ ಯೋಜನೆಯ ಪ್ರಯೋಜನ ಪಡೆಯಬಹುದು ಅರ್ಜಿ ಸಲ್ಲಿಸಲು ಯಾವುದೇ ಆದಾಯದ ಮಿತಿ ಇರುವುದಿಲ್ಲ. ಮೊದಲ ಬಾರಿ ಗರ್ಭಿಣಿಯಾದ ಪ್ರತಿಯೊಬ್ಬ ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಶಿವಮೊಗ್ಗ ತಾಲ್ಲೂಕಿಗೆ 2020-21 ನೇ ಸಾಲಿನಲ್ಲಿ ಗುರಿ ನಿಗದಿಪಡಿಸಲಾಗಿದ್ದು, ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ವಾಸವಿರುವ ಮೊದಲ ಬಾರಿ ಗರ್ಭಿಣಿ ಮಹಿಳೆಯರು ಸಮೀಪದ ಅಂಗನವಾಡಿ ಕಾರ್ಯಕರ್ತೆಯರು ಅಥವಾ ICDS ಮೇಲ್ವಿಚಾರಕರು ಅಥವಾ CDPO ಶಿವಮೊಗ್ಗ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಇವರನ್ನು ಸಂಪರ್ಕಿಸಲು ಕೊರಿದೆ. ಎಂದು CDPO ಶಿವಮೊಗ್ಗ ಇವರ ಪ್ರಕಟಣೆ ತಿಳಿಸಿದೆ.

error: Content is protected !!