ಶಿವಮೊಗ್ಗ, ಅಕ್ಟೋಬರ್ 28 : ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ (ಲಿಡ್ಕ್ರ್) ವ್ಯಾಪ್ತಿಯಲ್ಲಿ ಬರುವ ಚಮ್ಮಾರ ಕಾರ್ಮಿಕರು ಅಸಂಘಟಿತ ವರ್ಗದ ಅಡಿಯಲ್ಲಿ ಬರುತ್ತಿದ್ದು, ತಿತಿತಿ.eshಡಿಚಿm.gov.iಟಿ ಠಿoಡಿಣಚಿಟ ಮೂಲಕ ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಆದಾಯ ಪ್ರಮಾಣ ಪತ್ರ, ವೃತ್ತಿ/ತರಬೇತಿ ಪ್ರಮಾಣ ಪತ್ರ ಹಾಗೂ ಬ್ಯಾಂಕಿನ ಖಾತೆಯ ವಿವರಗಳೊಂದಿಗೆ ತಮ್ಮ ಮೊಬೈಲ್ ಮೂಲಕ ಹಾಗೂ ಹತ್ತಿರವಿರುವ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೊಂದಾಯಿಸಿಕೊಳ್ಳುವಂತೆ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಯೋಜನೆಯಡಿ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಹಾಗೂ ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19 ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ. 16 ರಿಂದ 59 ವಯೋಮಾನದವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು ಮತ್ತು ಭವಿಷ್ಯನಿಧಿ ಹಾಗೂ ಇಎಸ್ಐ ಫಲಾನುಭವಿಗಳಾಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214, ಇ-ಶ್ರಮ ಸಹಾಯವಾಣಿ 14434, ದೂರುಗಳನ್ನು ಸಲ್ಲಿಸಲು www.gms.eshram.gov.inಭೇಟಿ ನೀಡುವುದು.