ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಯೋಜನೆಯಡಿ ನಡೆಯುತ್ತಿರುವ ಶಿವಮೊಗ್ಗದ ಜನ ಶಿಕ್ಷಣ ಸಂಸ್ಥೆ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಯೋಜಿಸಲಾಗಿತ್ತು ಪ್ರಯುಕ್ತ ಮಾಹಿತಿ ಕಾರ್ಯಕ್ರಮ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 25 ಜನ ಮಹಿಳಾ ಸಾಧಕರನ್ನು ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಆಯೋಜಿಸಲಾಗಿತ್ತು ಚಿತ್ತಾರದ ರಂಗವಲ್ಲಿಯ ಪ್ರದರ್ಶನ ನಡೆಯಿತು

:

ಅರುಣ್ ಡಿ.ಎಸ್. ಅರುಣ್ ವಿಧಾನ ಪರಿಷತ್ ಸದಸ್ಯರು ಕಾರ್ಯಕ್ರಮ ಚಾಲನೆ ನೀಡಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ನಿರಂತರವಾಗಿ ತೊಡಗಿಕೊಳ್ಳುತ್ತಿದ್ದಾರೆ ಒಂದು ಹೆಣ್ಣು ಮಗು ಮನೆಯಲ್ಲಿ ಜನನವಾದರೆ ಅದರ ಸಂಭ್ರಮವೇ ಬೇರೆ ಹೆಣ್ಣು ಮಗು ಕುಟುಂಬದ ಭವಿಷ್ಯವನ್ನು ಬದಲಾಯಿಸುತ್ತದೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಪಡಾವೋ ಬೇಟಿ ಬಚಾವ್ ರೂಪಿಸಿದ್ದಾರೆ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಹೆಣ್ಣುಮಕ್ಕಳು ನೀಡಿದ ಕೊಡುಗೆ ದೊಡ್ಡದು ಸರ್ಕಾರದ ಯೋಜನೆಗಳು ಹೆಣ್ಣುಮಕ್ಕಳನ್ನು ತಲುಪುವಂತಾಗಬೇಕು ಎಂದರು

ಅರುಣಾದೇವಿ ನಿರ್ದೇಶಕರು ಜನಶಿಕ್ಷಣ ಸಂಸ್ಥೆ ಶಿವಮೊಗ್ಗ ಮಾತನಾಡಿ ಹೆಣ್ಣು ಮಕ್ಕಳಿಗೆ ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಅವರಿಗೆ ಉದ್ಯೋಗ ದೊರಕಿಸಿಕೊಡುವ ಕೆಲಸವನ್ನು ಮಾಡುತ್ತಿದ್ದೇವೆ ನಮ್ಮ ಸಂಸ್ಥೆ ಕಳೆದ 20 ವರ್ಷಗಳಿಂದ ನಿರಂತರವಾಗಿ ಹೆಣ್ಣುಮಕ್ಕಳಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿಯನ್ನು ನೀಡುತ್ತಾ ಬಂದಿದೆ ಇಂದು 25 ಸಾಧಕ ಹೆಣ್ಣುಮಕ್ಕಳನ್ನು ಗೌರವಿಸುತ್ತಿದೆ ಎಂದರು

ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂಎಲ್ ವೈಶಾಲಿ ಸಂಸ್ಥೆಯ ಅಧ್ಯಕ್ಷ ಎಸ್ಬಿ ಕಮಲಾಕರ್ ಇತರರು ಹಾಜರಿದ್ದರು

error: Content is protected !!