ಶಿವಮೊಗ್ಗ : ಕೇಂದ್ರ ಮತ್ತು ರಾಜ್ಯ ಸರ್ಕಾರ ಮೂಲಭೂತ ಸೌಕರ್ಯಗಳಾದ ಪ್ರತಿಯೊಬ್ಬರಿಗೂ ಸೂರು ಕುಡಿಯಲು ನೀರು ರಸ್ತೆ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸುತ್ತಿದೆ
ಅದರಲ್ಲಿಯೂ ಶಿವಮೊಗ್ಗ ಜಿಲ್ಲೆಯ ಪರಿಶಿಷ್ಟ ಸಮುದಾಯದ ಹೆಚ್ಚು ಜನರು ವಾಸಿಸುತ್ತಿರುವ ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಈ ಯೋಜನೆಗಳು ಫಲವಂತಿಕೆಯನ್ನು ಕಂಡಿವೆ.
ಅತ್ಯಂತ ಆಸಕ್ತಿ ವಹಿಸಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಮನೆಮನೆಗೆ ಗಂಗೆ ವ್ಯವಸ್ಥಿತವಾಗಿ ಮುನ್ನಡೆದಿದೆ.
ಈ ಕ್ಷೇತ್ರದಲ್ಲಿ ವಾಸಿಸುವ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯುತ್ತಿರಲಿಲ್ಲ ಕುಡಿಯುವ ನೀರಿಗಾಗಿ ಬಹು ದೂರದಿಂದ ನೀರು ತರಬೇಕಾದ ಪರಿಸ್ಥಿತಿ ಇತ್ತು. ಇದನ್ನು ಮನಗಂಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಈ ಪ್ರದೇಶದಲ್ಲಿ ಸಂಪೂರ್ಣವಾಗಿ ಜಲಜೀವನ್ ಮಿಷನ್ ಯೋಜನೆಯಯನ್ನು ರೂಪಿಸಿದೆ. ಇದರ ಪರಿಣಾಮವಾಗಿ ಇಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಜನರಿಗೆ ಹಾಗೂ ಇತರರಿಗೆ ಉತ್ತಮವಾದ ಶುದ್ಧ ಕುಡಿಯುವ ನೀರು, ಮನೆ ಬಾಗಿಲಿಗೆ ತಲುಪುತ್ತಿದೆ.
ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ನೀರಿನ ಮಹತ್ವವನ್ನು ಕೂಡ ಜನತೆಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದಾರೆ.
ಶಿವಮೊಗ್ಗ ಮೀಸಲು ಕ್ಷೇತ್ರದ ಪ್ರದೇಶಗಳಲ್ಲಿ ವ್ಯವಸ್ಥಿತ ಕುಡಿಯುವ ನೀರನ್ನು ಸರ್ಕಾರ ನೀಡಿ, ಫಲಾನುಭವಿಗಳ ಬದುಕಿನಲ್ಲಿ ಸಾರ್ಥಕತೆಯನ್ನು ಮೂಡಿಸಿದೆ.
ಅನಿತಾ ಗೃಹಿಣಿ ಫಲಾನುಭವಿ ತಮ್ಮ ಅನುಭವವನ್ನು ಹಂಚಿಕೊಂಡು ನಾವು ಕೂಲಿ ಮಾಡಿ ಜೀವನ ನಿಭಾಯಿಸುತ್ತೇವೆ ನಮಗೆ ಶುದ್ಧ ಕುಡಿಯುವ ನೀರಿಲ್ಲದೆ ಬಹಳ ಸಮಸ್ಯೆಗೆ ಒಳಗಾಗಿದ್ದೆವು. ಈಗ ಜಲಜೀವನ್ ಮಿಷನ್ ಮನೆ ಮನೆಗೆ ಗಂಗೆ ಮೂಲಕ ಉತ್ತಮವಾದ ಶುದ್ಧ ಕುಡಿಯುವ ನೀರನ್ನು ನೀಡುತ್ತಿದೆ ಎಂದರು
ಜಗದೀಶ್ ಕಾರ್ಯ ಪಾಲಕ ಅಭಿಯಂತರು ಮಾಹಿತಿ ನೀಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಮೀಸಲು ಕ್ಷೇತ್ರದಲ್ಲಿ ಮನೆ ಮನೆಗೆ ಗಂಗೆ ಅತ್ಯಂತ ವ್ಯವಸ್ಥಿತವಾಗಿ ಮುನ್ನಡೆದಿದೆ 23 ಕೋಟಿಗೂ ಅಧಿಕ ಹಣವನ್ನು ಈ ಯೋಜನೆಯಲ್ಲಿ ಇಲ್ಲಿ ಉಪಯೋಗಿಸಲಾಗಿದೆ ಹಾಗು ಇದರ ಉಪಯೋಗವನ್ನು ಜನರು ಸದ್ಬಳಕೆಯನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಮತ್ತೋರ್ವ ಪುರುಷೋತ್ತಮ್ ಫಲಾನುಭವಿ ಮಾತನಾಡಿ ನಮ್ಮ ಭಾಗದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇತ್ತು ಮನೆ ಮನೆಗೆ ಗಂಗೆಯಿಂದ ಈ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ದೊರೆತಿದೆ ಮತ್ತು ಅದನ್ನು ಅತ್ಯಂತ ಸಮರ್ಥವಾಗಿ ಬಳಸುವಲ್ಲಿ ಜನರಿಗೆ ಅರಿವು ಕೂಡ ಮೂಡಿಸಲಾಗುತ್ತಿದೆ ಹಾಗೂ ಯೋಜನೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ನಾಯ್ಕ ಮಾಧ್ಯಮದೊಂದಿಗೆ ಮಾತನಾಡಿ ನಮ್ಮ ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ಸಮಸ್ಯೆ ಇತ್ತು ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ್ ಮಿಷನ್ ಮನೆ ಮನೆಗೆ ಗಂಗೆ ಇದನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಕೊಟ್ಟಿದ್ದೇವೆ, ಸರ್ಕಾರದ ಈ ಯೋಜನೆಯಿಂದ ನಮ್ಮ ಕ್ಷೇತ್ರದ ಜನರಿಗೆ ಅತ್ಯಂತ ಅನುಕೂಲವಾಗಿದೆ ಕೆಲಸಗಳು ಮಾದರಿಯಾಗಿ ನಡೆದಿದೆ ಇದರಿಂದ ನನ್ನ ಕ್ಷೇತ್ರದ ಜನರಿಗೆ ತುಂಬಾ ಅನುಕೂಲವಾಗಿದೆ