ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ವತಿಯಿಂದ  ಶ್ರೀ ಶಂಕರಾಚಾರ್ಯ ಜಯಂತಿಯನ್ನು ಕುವೆಂಪು ರಂಗಮಂದಿರದಲ್ಲಿ ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಉದ್ಘಾಟನೆಯನ್ನು ಮಾನ್ಯ ಉಪಮಹಾಪೌರರಾದ ಶ್ರೀಮತಿ ಸುರೇಖಾ ಮುರಳೀಧರ್ ರವರು ನೆರವೇರಿಸಿದರು. ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಶ್ರೀ ನಟರಾಜ ಭಾಗವತ್ ರವರು  ಶಂಕರಾಚಾರ್ಯರ ಆದರ್ಶಗಳನ್ನು ಅಳವಡಿಸಿಕೊಳ್ಳಲು ಕರೆ ನೀಡಿದರು. ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಕೆ.ಬಿ. ಶಿವಕುಮಾರ್, ಪೌರಾಯುಕ್ತರಾದ ಶ್ರೀ ಚಿದಾನಂದ ವಠಾರೆ, ತಾಲ್ಲೂಕು ಬ್ರಾಹ್ಮಣ ಸಭಾ ಅಧ್ಯಕ್ಷರಾದ ಶ್ರೀ ಮಾಧವ ಮೂರ್ತಿ, ಶಂಕರಮಠದ ಧರ್ಮಾಧಿಕಾರಿಗಳಾದ ಡಾ|| ನಾರಾಯಣ ಪಿ.‌, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್. ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. 

error: Content is protected !!