ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ವತಿಯಿಂದ ಶ್ರೀ ಕೃಷ್ಣ ಜಯಂತಿಯನ್ನು ಕುವೆಂಪು ರಂಗಮಂದಿರ, ಶಿವಮೊಗ್ಗದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಮಾನ್ಯಶ್ರೀ ಕೆ.ಎಸ್.ಈಶ್ವರಪ್ಪರವರು ಜಯಂತಿಯನ್ನು ಉದ್ಘಾಟಿಸಿ, ಸಮುದಾಯದ ಬಾಂಧವರಿಗೆ ಶುಭ ಹಾರೈಸಿದರು. ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾನ್ಯಶ್ರೀ ಡಿ.ಎಸ್. ಅರುಣ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ಜಯಶೇಖರ್, ಮಹಾನಗರಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಸುವರ್ಣ ಶಂಕರ್, ಉಪಮಹಾಪೌರರಾದ ಶ್ರೀಮತಿ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕರಾದ ಶ್ರೀ ಚನ್ನಬಸಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಜ್ಞಾನೇಶ್ವರ್, ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀ ಕೆ.ಬಿ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್., ಯಾದವ ಸಂಘದ ಜಿಲ್ಲಾ ಅಧ್ಯಕ್ಷರಾದ ಶ್ರೀ ಮೈಲಾರಪ್ಪ, ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ, ತಾಲ್ಲೂಕು ಕೃಷ್ಞ ಯಾದವ ಸಂಘದ ಅಧ್ಯಕ್ಷರಾದ ಶ್ರೀಜಗದೀಶ, ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ಶ್ರೀ ಹುಚ್ಚಪ್ಪ, ಸಂಘದ ಇತರೇ ಸದಸ್ಯರು ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. |