ಶಿವಮೊಗ್ಗ, ಮಾರ್ಚ್ 15 : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
ಈ ಪರಿಕಲ್ಪನೆಯ ಅಂಗವಾಗಿ ದಿ:19/03/2022ರ ಶನಿವಾರ ಬೆಳಗ್ಗೆ 11.00ಕ್ಕೆ ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಎಲ್ಲಾ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಂದ ಈ ಗ್ರಾಮದ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ದಿ:19/03/2022 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!