ಮುಂಗಾರು ಕೊರತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ2.75 ಕೋಟಿ ರು ಮಂಜೂರು ಆಗಿದ್ದು, 1.75 ಕೋಟಿ ರು ಬಿಡುಗಡೆ ಆಗಿದ್ದು 1.53 ಕೋಟಿ ರು ಖರ್ಚು ಮಾಡಲಾಗಿದೆ.
ಒಟ್ಟು ಕುಡಿಯುವ ನೀರಿನ180 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದ್ದು, 160 ಕಾಮಗಾರಿಗಳು ಪೂರ್ಣಗೊಂಡಿವೆ. 20 ಕಾಮಗಾರಿಗಳು ಪ್ರಗತಿಯಲ್ಲಿವೆ.
ಟಾಸ್ಕ್ ಫೋರ್ಸ್ ಎರಡನೇ ಹಂತದಲ್ಲಿ ಕುಡಿಯೋ ನೀರಿನ ಕಾಮಗಾರಿಗಳಿಗಾಗಿ 13.5 ಕೋಟಿ ರು ಅನುದಾನದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, 1.30 ಕೋಟಿ ರೂ ಬಿಡುಗಡೆಯಾಗಿದೆ.
ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ಬಿಡುಗಡೆಯಾಗಿರುವ ಎಲ್ಲಾ ಹಣವನ್ನು ಪಾವತಿ ಮಾಡುವಂತೆ ಸಚಿವರಿಂದ ಸೂಚನೆ.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿಸಲು ಜಲಧಾರೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಬೇಕು. ನದಿಯಲ್ಲಿ ನೀರಿದ್ದಾಗ ಅದನ್ನು ಕೆರೆಗಳಿಗೆ ತುಂಬಿಸುವ ಯೋಜನೆ ಇದಾಗಿದೆ. ಕೆರೆಗಳ ಪುನರುಜ್ಜೀವನ ಹಾಗೂ ಅಂತರ್ಜಲ ಮಟ್ಟ ಹೆಚ್ಚಲು ಸಾಧ್ಯವಿದೆ. ಜಿಲ್ಲೆಯಲ್ಲಿ ಎಷ್ಟು ಕೆರೆಗಳ ಹೂಳು ಎತ್ತಿ ಅಭಿವೃದ್ಧಿಪಡಿಸಬಹುದು ಎಂಬ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು.
ಜಿಲ್ಲೆಯಲ್ಲಿ ಹಲವು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಹಲವು ವರ್ಷಗಳಿಂದ ಕುಂಟುತ್ತಾ ನಡೆಯುತ್ತಿರುವ ಬಗ್ಗೆ ದೂರುಗಳಿದ್ದು ಕುರಿತು ಸಮಗ್ರವಾದ ವರದಿಯನ್ನು ಸಲ್ಲಿಸಬೇಕು.
ಇದೇ ರೀತಿ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ದುರಸ್ತಿ ಕಾರ್ಯಗಳ ಕುರಿತು ವರದಿಯನ್ನು ಶಾಲೆಗಳ ಛಾಯಾ ಚಿತ್ರದೊಂದಿಗೆ ಒದಗಿಸಬೇಕು. 82 ಪ್ರಾಥಮಿಕ ಶಾಲೆಗಳ ದುರಸ್ತಿಗಾಗಿ ಅನುದಾನ ಬಿಡುಗಡೆಯಾಗಿದೆ. 54 ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು 11 ಕಾಮಗಾರಿಗಳು ಪ್ರಗತಿಯಲ್ಲಿವೆ.
ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಆಡಳಿತಾತ್ಮಕ ತೊಂದರೆಯಿಂದಾಗಿ ಹಲವಾರು ಸಮಸ್ಯೆಗಳು ಉಂಟಾಗಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಕೆ. ಎ ದಯಾನಂದ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ ಶಿವರಾಮೇಗೌಡ, ಶಾಸಕರಾದ ಕೆ.ಎಸ್. ಈಶ್ವರಪ್ಪ, ಹರತಾಳು ಹಾಲಪ್ಪ, ಕುಮಾರಬಂಗಾರಪ್ಪ, ಅರಗ ಜ್ಞಾನೆಂದ್ರ, ಆಯನೂರು ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.