ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ರವರ ನೇತೃತ್ವದಲ್ಲಿ #ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಯಕರ್ತರೊಂದಿಗೆ ಡಿ ಸಿ ಯವರ ಕಚೇರಿಗೆ ತೆರಳಿ #ಶರಾವತಿ ನದಿಯಿಂದ ಬೆಂಗಳೂರಿಗೆ #ನೀರು ಸರಬರಾಜು ಮಾಡುವ ಯೋಜನೆಯನ್ನು ತಕ್ಷಣ ಕೈ ಬಿಡ ಬೇಕೆಂದು ಶಿವಮೊಗ್ಗ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು,
ಶರಾವತಿ ನದಿಗೆ ನಿರ್ಮಿಸಲಾಗಿರುವ ಲಿಂಗನಮಕ್ಕಿ ಜಲಾಶಯದಿಂದ ಈಗಾಗಲೇ ವಿದ್ಯುಚ್ಛಕ್ತಿ ಉತ್ಪಾದಿಸಿ ರಾಷ್ಟ್ರದ ಜನೆತೆಗೆ ಅಪಾರ ಕೊಡುಗೆ ನೀಡಿದೆ, ರಾಷ್ಟ್ರಕ್ಕೆ ಬೆಳಕು ಕೊಟ್ಟು ಕತ್ತಲಲ್ಲಿ ಬದುಕುತ್ತಿದ್ದಾರೆ, ಶರಾವತಿ ನದಿಯಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಕೈಗೊಂಡಿರುವುದು ಅತ್ಯಂತ ಖಂಡನೀಯ,ಅಲ್ಲದೆ ಶರಾವತಿ ನದಿ ಪಾತ್ರದಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು ನದಿಪಾತ್ರದ ಜನರೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಪಡುವ ಸ್ಥಿತಿ ನಿರ್ಮಾಣವಾಗಿದೆ, ಇಲ್ಲಿ ಕುಡಿಯುವ ನೀರಿನ ಬವಣೆ ಇದ್ದಾಗ ಬೆಂಗಳೂರಿಗೆ 10 ಟಿಎಂಸಿ ನೀರು ಹರಿಸುವುದು ಎಷ್ಟರಮಟ್ಟಿಗೆ ಸರಿ?
ಜುಲೈ 6ರಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ಈದಿನ ಜಿಲ್ಲೆಯ ಜನತೆ ಶರಾವತಿ ಉಳಿವಿಗಾಗಿ ಕರೆನೀಡಿರುವ ಶಿವಮೊಗ್ಗ ಜಿಲ್ಲೆ ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರ ಯೋಜನೆಯನ್ನು ಈ ಕೂಡಲೇ ಕೈ ಬಿಡಬೇಕೆಂದು ಮನವಿ ಮಾಡಿಕೊಂಡಿರುತ್ತಾರೆ,ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಪಾಲ್ಗೊಂಡಿದ್ದರು,