
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರಾಗಿ ಸಾಗರ ನಗರದ ಮಾಜಿ ನಗರಸಭಾ ಸದಸ್ಯರು, ಹಾಲಿ ಸಾಗರ ನಗರಸಭಾ ಸದಸ್ಯರು, ಪ್ರಸ್ತುತ ಜಿಲ್ಲಾ ಬಿಜೆಪಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸಾಗರ ನಗರದ ಅಣಲೇಕೊಪ್ಪ ನಿವಾಸಿ ಶ್ರೀ ಟಿ.ಡಿ.ಮೇಘರಾಜ್ ಬಿನ್ ದಾನಪ್ಪಗೌಡ ಇವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರೂ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಪಿ.ಅರುಣಕುಮಾರ್, ಪಕ್ಷದ ಸಾಂಸ್ಥಿಕ ಜಿಲ್ಲಾ ಚುನಾವಣಾಧಿಕಾರಿ ಮೋನಪ್ಪ ಭಂಡಾರಿ, ಸಂಸತ್ ಸದಸ್ಯರಾದ ಬಿ.ವೈ.ರಾಘವೇಂದ್ರ, ಪಕ್ಷದ ಸಾಂಸ್ಥಿಕ ಚುನಾವಣಾ ಸಹ ಚುನಾವಣಾಧಿಕಾರಿ ಎಂ.ಶಂಕರ್, ಶಾಸಕರುಗಳಾದ ಆಯನೂರು ಮಂಜುನಾಥ್, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕನಾಯ್ಕ್, ಮಾಜಿ ಶಾಸಕರಾದ ಆರ್.ಕೆ.ಸಿದ್ದರಾಮಣ್ಣ ಸೇರಿದಂತೆ ವಿಭಾಗ ಪ್ರಮುಖರುಗಳು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.