ಶಿವಮೊಗ್ಗ, ಜನವರಿ 21:ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪ್ರಾಣಿ ತಳಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು/ ರೈತ ಮಹಿಳೆಯರು/ ನಿರುದ್ಯೋಗ ಯುವಕ ಯುವತಿಯರಿಗೆ ಜ.23 ರಂದು ಶಿವಮೊಗ್ಗದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗದಲ್ಲಿ ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಯಲ್ಲಿ ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ-ಪ್ರಾಯೋಗಿಕ ತರಬೇತಿ, ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳನ್ನು ತಿಳಿಸಲಾಗುವುದು.