ಶಿವಮೊಗ್ಗ : ಡಿಸೆಂಬರ್ 14 : ಸಾರ್ವಜನಿಕ ಗ್ರಂಥಾಲಯ ಇಲಾಖೆಯು ರಾಜ್ಯದಲ್ಲಿ ಸಾರ್ವಜನಿಕ ಓದುಗರ ಅನುಕೂಲಕ್ಕಾಗಿ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಸೇವೆಯನ್ನು ಪ್ರಾರಂಭಿಸಲಾಗಿದೆ ಎಂದು ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಡಿಜಿಟಲ್ ಗ್ರಂಥಾಲಯ ಸೇವೆಯನ್ನು ಬಳಸಿಕೊಳ್ಳಲು ಅರಿವು ಮೂಡಿಸುವ ಸಲುವಾಗಿ ಗ್ರಂಥಾಲಯ ಇಲಾಖೆಯು ಅಭಿವೃದ್ಧಿಪಡಿಸಿರುವ ‘e-Sarvajanika Granthalaya’ ಮೊಬೈಲ್ ಆ್ಯಪ್‍ನ್ನು ಹಾಗೂ ಜಾಲತಾಣ www.karnatakadigitalpubliclibrary.org ಮೂಲಕ ಡೌನ್‍ಲೋಡ್ ಮಾಡಿಕೊಂಡು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಂಡು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್, ಟ್ಯಾಬ್ ಮೂಲಕ ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳನ್ನು ಉಚಿತವಾಗಿ ಓದಿ ಸದುಪಯೋಗ ಪಡೆದುಕೊಳ್ಳಲು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕೋರಲಾಗಿದೆ.
ಇ-ಗ್ರಂಥಾಲಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಇ-ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳು, ಅಇಖಿ/ಓಇಇಖಿ/UPSಅ/ಏPSಅ ಅಲ್ಲದೇ ರಾಜ್ಯ ಸರ್ಕಾರದ ಅಃSಅ/IಅSಇ/ಓಅಇಖಖಿ ಪಠ್ಯಪುಸ್ತಕಗಳು ಮತ್ತು ವಿವಿಧ ಭಾಷೆಗಳ ಪ್ರಾದೇಶಿಕ, ರಾಷ್ಟ್ರೀಯ ದಿನಪತ್ರಿಕೆಗಳು ಹಾಗೂ ನಿಯತಕಾಲಿಕೆಗಳು ಲಭ್ಯವಿರಲಿವೆ ಎಂದವರು ತಿಳಿಸಿದ್ದಾರೆ.