ಶಿವಮೊಗ್ಗ, ಡಿಸೆಂಬರ್ 26 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ ಮತ್ತು ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 9.45ಕ್ಕೆ ಕುಪ್ಪಳಿಯ ಹೇಮಾಂಗಣದಲ್ಲಿ ಕುವೆಂಪು ಅವರ 115ನೇ ಜನ್ಮದಿನೋತ್ಸವ, ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಹಾಗೂ ಕುವೆಂಪು ಸಾಹಿತ್ಯ ಅಧ್ಯಯನ ಶಿಬಿರ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 9.45ಕ್ಕೆ ಅತಿಥಿಗಳಿಂದ ಕವಿಶೈಲದಲ್ಲಿ ಕವಿನಮನ, 10.15ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿ, ಪಂಜಾಬಿ ಸಾಹಿತಿ ಡಾ|| ಅಜೀತ್ ಕೌರ್ ಮತ್ತು ಗುರುಬಚನ್ ಸಿಂಗವ ಭುಲ್ಲರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಹಾಗೂ ಮಂತ್ರಮಾಂಗಲ್ಯ ಇಂಗ್ಲೀಷ್ ಆವೃತ್ತಿಯ ಪುಸ್ತಕ ಬಿಡುಗಡೆ ಮಾಡುವರು.
ಇದೇ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗಾಂಧಿ-150 ಪುಸ್ತಕ ಬಿಡುಗಡೆಗೊಳಿಸುವರು. ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಅವರು 2020ರ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಹಂ.ಪ.ನಾಗರಾಜಯ್ಯ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಕುವೆಂಪು ವಿವಿ. ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಸಿ.ನಾರಾಯಣಸ್ವಾಮಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಎಸ್.ಕುಮಾರ್, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
ಅಂದು ಮಧ್ಯಾಹ್ನ 2.30ಕ್ಕೆ ಸಾಹಿತ್ಯ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಸಾಹಿತಿ ಪ್ರೊ. ಓ.ಎಲ್.ನಾಗಭೂಷಣಸ್ವಾಮಿ ಶಿಬಿರವನ್ನು ಉದ್ಘಾಟಿಸುವರು.
ಸಂಜೆ 6ಗಂಟೆಗೆ ಕೋಲಾರದ ಶ್ರೀ ಜಯನಾಟ್ಯಂ ಕಲಾ ಅಕಾಡೆಮಿ ಅವರಿಂದ ವಿದ್ವಾನ್ ಕೋಲಾರ್ ರಮೇಶ್ ಅವರ ನಿರ್ದೇಶನದಲ್ಲಿ ಶ್ರೀ ರಾಮಾಯಣ ದರ್ಶನಂ ನ್ಯತ್ಯರೂಪಕ ಹಾಗೂ ಬೆಂಗಳೂರಿನ ರಾಷ್ಟ್ರೀಯ ನಾಟಕ ಶಾಲೆ ಇವರಿಂದ ಕುವೆಂಪು ವಿರಚಿತ ಬೆರಳ್‍ಗೆ ಕೊರಳ್ ನಾಟಕವನ್ನು ಚೆನ್ನೈನ ಪ್ರಸನ್ನ ರಾಮಸ್ವಾಮಿ ಅವರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ತೀರ್ಥಹಳ್ಳಿಯ ನಟಮಿತ್ರರು ಸಹಕಾರ ನೀಡುವರು.

error: Content is protected !!