ಶಿವಮೊಗ್ಗ : ಡಿಸೆಂಬರ್ 06 : ಡಿಸೆಂಬರ್ 07ರಂದು ಬೆಳಿಗ್ಗೆ 10ಗಂಟೆಗೆ ನೆಹರೂ ರಸ್ತೆಯಲ್ಲಿರುವ ಸಿ.ಎಂ.ಸಿ. ಕಟ್ಟಡದ 2ನೇ ಮಹಡಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಪಶುವೈದ್ಯಾಧಿಕಾರಿಗಳಿಗೆ ಆಡಳಿತ ಮತ್ತು ತಾಂತ್ರಿಕ ವಿಷಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಉದ್ಘಾಟಿಸಲಿದ್ದಾರೆ ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.