ಶಿವಮೊಗ್ಗ, ಫೆಬ್ರವರಿ 23, :
ಶಿವಮೊಗ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಭದ್ರಾವತಿ, ಸಾಗರ ನಗರಸಭೆ ಹಾಗೂ ಶಿಕಾರಿಪುರ, ಸೊರಬ, ಶಿರಾಳಕೊಪ್ಪ ಪುರಸಭೆ ಮತ್ತು ತೀರ್ಥಹಳ್ಳಿ, ಹೊಸನಗರ, ಜೋಗ್-ಕಾರ್ಗಲ್ ಪಟ್ಟಣ ಪಂಚಾಯಿತಿ ಇಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಕರ್ನಾಟಕ ಪೌರಸಭೆಗಳ (ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿನ ಪೌರಕಾರ್ಮಿಕ ನೇಮಕಾತಿ) (ವಿಶೇಷ) ನಿಯಮಗಳು 2022 ರ ರೀತ್ಯಾ ಭರ್ತಿ ಮಾಡಲು ತಾತ್ಕಾಲಿಕ ಆಯ್ಕೆ ಪಟ್ಟಿಯ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಗಳೇನಾದರು ಇದ್ದಲ್ಲಿ ಈ ಅಧಿಸೂಚನೆ ಹೊರಡಿಸಿದ 7 ದಿನಗಳೊಳಗಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಶಿವಮೊಗ್ಗ ಇಲ್ಲಿ ಕಚೇರಿ ವೇಳೆಯಲ್ಲಿ ಲಿಖಿತ ರೂಪದಲ್ಲಿ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಈ ಅಧಿಸೂಚನೆಯನ್ನು ಆಯಾ ನಗರ ಸ್ಥಳೀಯ ಸಂಸ್ಥೆಗಳ ವೆಬ್‍ಸೈಟ್‍ನಲ್ಲಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ವೆಬ್‍ಸೈಟ್ ಹಾಗೂ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿವಮೊಗ್ಗ ಇಲ್ಲ್ಲಿ ಪ್ರಕಟಿಸಲಾಗಿರುತ್ತದೆಂದು ಶಿವಮೊಗ್ಗ ಪೌರಕಾರ್ಮಿಕ ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ

.

error: Content is protected !!