ಶಿವಮೊಗ್ಗ, ಜೂನ್-01 : 2023-24ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪ.ಜಾ/ಪ.ಪಂ.ದ ಹಾಗೂ 25% ರಷ್ಟು ಹಿಂದುಳಿದ ವರ್ಗಗಳ 5 ರಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in ರಲ್ಲಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08181-227628ನ್ನು ಸಂಪರ್ಕಿಸುವುದು.

error: Content is protected !!