News Next

ಶಿವಮೊಗ್ಗ, ಸೆಪ್ಟೆಂಬರ್ 06 :
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯ ‘ಸಿ’ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ 633 ಪ್ರವರ್ಗ ‘ಸಿ’ ದೇವಾಲಯಗಳಿಗೆ ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ಅರ್ಹ ಸದಸ್ಯರುಗಳನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಿದ್ದು ಕನಿಷ್ಟ 25 ವರ್ಷ ತುಂಬಿರುವವರು ಅಕ್ಟೋಬರ್ 05 ರೊಳಗೆ ಅರ್ಜಿ ಸಲ್ಲಿಸಬಹುದು.
ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರ ಕಚೇರಿಯಲ್ಲಿ ಅರ್ಜಿ ನಮೂನೆ ಲಭ್ಯವಿದ್ದು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗದಿತ ನಮೂನೆ-1 (ಬಿ)(22 ನೇ ನಿಯಮ) ರಲ್ಲಿ ಭರ್ತಿ ಮಾಡಿ ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲ್ಲೂಕುಗಳ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಧಾರ್ಮಿಕ ಪರಿಷತ್‍ನ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಕೆ.ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!