ಶಿವಮೊಗ್ಗ: ದೇಶದ ಅಭಿವೃದ್ಧಿ ಚಿಂತನೆ ಹಾಗೂ ಪಕ್ಷದ ಸಂಘಟನೆ ದೃಷ್ಠಿಯಿಂದ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಪಾದಾಯಾತ್ರೆ ನಿಜಕ್ಕೂ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರೆ ಜಿ.ಪಲ್ಲವಿ ಹೇಳಿದರು.
ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ 100 ದಿನ ಪೂರೈಸಿರುವ ಹಿನ್ನೆಯಲ್ಲಿ ಶಿವಮೊಗ್ಗ ತಾಲೂಕಿನ ಆಯನೂರು ಸರ್ಕಲ್ನಲ್ಲಿ ಪಲ್ಲವಿ ನೆರವು ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶಕ್ಕಾಗಿ ಸೇವೆ ಸಲ್ಲಿಸಿದ ತ್ಯಾಗಮಯಿ ಕುಟುಂಬ ರಾಹುಲ್ ಗಾಂಧಿ ಅವರದು. ದೇಶದ ಅಭಿವೃದ್ಧಿಗಾಗಿ ರಾಹುಲ್ ಗಾಂಧಿ ಕುಟುಂಬ ಜೀವನವನ್ನೇ ಸಮರ್ಪಣೆ ಮಾಡಿದೆ.ಇಂತಹ ನಾಯಕ ದೇಶಕ್ಕೆ ಅವಶ್ಯಕತೆ ಇದೆ ಎಂದು ತಿಳಿಸಿದರು.
ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಹೋರಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವೈಫಲ್ಯ ಅನುಭವಿಸಿದೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಆಡಳಿತ ನಡೆಸುವುದು ಅವಶ್ಯಕವಾಗಿದೆ ಎಂದರು.
ರಾಹುಲ್ ಗಾಂಧಿ ಅವರು 8 ರಾಜ್ಯಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಕಿಮೀ ಯಾತ್ರೆ ನಡೆಸಿದ್ದಾರೆ. ದೇಶದ ಎಲ್ಲರೊಂದಿಗೆ ಭಾಗಿಯಾಗಿ ಹೆಜ್ಜೆ ಹಾಕುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ದೊಡ್ಡ ಸ್ಥಾನ ಅಲಂಕರಿಸುವಂತಾಗಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಆರ್.ಎಂ.ಮಂಜುನಾಥ್ಗೌಡ, ಕಲಗೋಡು ರತ್ನಾಕರ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.