News Next

ಶಿವಮೊಗ್ಗ, ಮಾರ್ಚ್ 06 : ಪರೀಕ್ಷೆಗಳು ನಡೆಯುವ ದಿನಗಳಂದು ಪ್ರತಿದಿನ ಬೆಳಿಗ್ಗೆ 7.30ರಿಂದ ಸಂಜೆ 3.30ರವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷಾ 200 ಮೀ ಪ್ರದೇಶದ ವ್ಯಾಪ್ತಿಯ ಒಳಗೆ ವಿದ್ಯಾರ್ಥಿಗಳ ತಂದೆ/ತಾಯಿ/ಪೋಷಕರು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸದ ಪರೀಕ್ಷಾ ಕೇಂದ್ರಗಳ ಅಧಿಕಾರಿ/ಸಿಬ್ಬಂದಿ ವರ್ಗದವರು ಒಳಗೊಂಡಂತೆ ಬೇರೆ ಯಾರು ಪ್ರವೇಶಿಸುವಂತಿಲ್ಲವೆಂದು ಮತ್ತು ಪ್ರವೇಶಕ್ಕೆ ಅನುಮತಿ ಇರುವುದಿಲ್ಲವೆಂದು, ಯಾರಾದರೂ 200 ಮೀ ವ್ಯಾಪ್ತಿಯೊಳಗೆ ಪ್ರವೇಶಿಸಿದರೆ/ಪ್ರವೇಶಿಸಲು ಯತ್ನಿಸಿದರೆ ಅಂತಹವರನ್ನು ನಿರ್ದಾಕ್ಷಿಣ್ಯವಾಗಿ ಪೊಲೀಸ್‍ರ ವಶಕ್ಕೆ ಒಪ್ಪಿಸಿ ಕೂಡಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!