ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಐ.ಸಿ.ಎ.ಆರ್.-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ, ಬೆಂಗಳೂರು ಇವರ ಸಹಯೋಗದೊಂದಿಗೆ ನೀರಾವರಿ ಪಂಪ್‍ಸೆಟ್‍ಗಳಲ್ಲಿ ಇಂಧನ ಸಾಮಥ್ರ್ಯ ಅಭಿವೃದ್ಧಿ ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆ ಮಾಡಿದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದಡಾ. ಎಂ.ಕೆ. ನಾಯಕ್‍ರವರು ಮಾತನಾಡುತ್ತಾ ಇಂದಿನ ಪರಿಸ್ಥಿತಿಯಲ್ಲಿ ನಮ್ಮ ರೈತರು ನೀರಿನ ಸಂರಕ್ಷಣೆ, ಹನಿ ನೀರಾವರಿ, ತುಂತುರು ನೀರಾವರಿ, ಮಳೆ ನೀರುಕೋಯ್ಲು ಬಗ್ಗೆ ಹೆಚ್ಚು ಗಮನ ವಹಿಸಬೇಕು ಜೊತೆಗೆ ಇಂಗು ಗುಂಡಿಯನ್ನು ನಿರ್ಮಿಸಿಕೊಂಡು ನೀರನ್ನು ಶೇಖರಣೆ ಮಾಡಿಕೊಂಡು ಬೇಸಿಗೆ ಸಮಯದಲ್ಲಿ ಉಪಯೋಗ ಮಾಡಿಕೊಂಡರೆ ಕೃಷಿಯಲ್ಲಿ ನೀರಿನ ಸಮಸ್ಯೆಯನ್ನು ನೀವಾರಿಸಬಹುದು. ಹಾಗೆಯೇ ಮುಂದುವರೆದು ರೈತರು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿಯಲ್ಲಿ ಅವರ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ದೇವರಾಜ್ ರೆಡ್ಡಿ, ಸದಸ್ಯರು ರಾಜ್ಯ ಯೋಜನಾ ಆಯೋಗ, ಬೆಂಗಳೂರು ಮತ್ತು ಜಲತಜ್ಞರು, ಚಿತ್ರದುರ್ಗ ಇವರು ರೈತರನ್ನು ಉದ್ದೇಶಿಸಿ ಮಾತನಾಡುತ್ತಾ ನೀರಿನ ಸಂರಕ್ಷಣೆಯನ್ನು ಮಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ತುಂಬಾ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಇದರ ಜೊತೆಗೆ ನೀರನ್ನು ಶೇಖರಿಸಿಕೊಳ್ಳುವ ವಿವಿಧ ಪದ್ಧತಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ನೀರಿನ ಸಂರಕ್ಷಣೆಗೆ ಬೋರ್‍ವೆಲ್ ರೀಚಾರ್ಜ್ ಮಾಡಿಕೊಳ್ಳಬೇಕು ಹಾಗೂ ಮಳೆನೀರು ಕೊಯ್ಲು ಮಾಡಿ ಇಂಗುಗುಂಡಿ, ಕೆರೆಕಟ್ಟೆಗಳಲ್ಲಿ ಶೇಖರಿಸಿಕೊಳ್ಳುವುದರಿಂದ ರೈತರು ನೀರಿನ ಕೊರತೆಯನ್ನು ನೀಗಿಸಿಕೊಳ್ಳಬಹುದು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ದಿನೇಶ್ ಕುಮಾರ್, ತಾಂತ್ರಿಕ ಅಧಿಕಾರಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ, ಬೆಂಗಳೂರು ಇವರು ಮಾತನಾಡುತ್ತಾ ಇಂಧನ ಸಾಮಥ್ರ್ಯದ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳಬೇಕು. ಹಾಗೆಯೇ ಸರ್ಕಾರದಿಂದ ದೊರೆಯುವ ಸವಲತ್ತುಗಳು ಮತ್ತು ಸಹಾಯ ಧನವÀನ್ನು ಉಪಯೋಗಿಸಿಕೊಂಡರೆ ಹಣ ಉಳಿತಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ. ಹೇಮ್ಲಾನಾಯ್ಕ್ , ಬಿ., ವಿಸ್ತರಣಾ ನಿರ್ದೇಶಕರು, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರು ಮಾತನಾಡುತ್ತಾ ನೀರಿನ ಸಂರಕ್ಷಣೆ ಮತ್ತು ಇಂಧನ ಉಳಿತಾಯ ಮಾಡಿಕೊಂಡರೆ ನಮ್ಮ ರೈತರಿಗೆ ತುಂಬಾ ಅನುಕೂಲವಾಗುತ್ತದೆ ಹಾಗೂ ನಮ್ಮ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದ್ದು, ಗುಣಮಟ್ಟದ ಮಾಹಿತಿಯನ್ನು ನೀಡುತ್ತಾ ಬಂದಿರುತ್ತಾರೆ ಎಂದು ತಿಳಿಸಿದರು.
ಡಾ. ಆರ್.ಸಿ ಜಗದೀಶ್, ಡೀನ್ (ಕೃಷಿ) ಹಾಗೂ ಆವರಣ ಮುಖ್ಯಸ್ಥರು, ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ಹಾಗೂ ಡಾ. ಎಸ್.ಯು. ಪಾಟೀಲ್, ಸಹ ವಿಸ್ತರಣಾ ನಿರ್ದೇಶಕರು, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ. ಬಿ.ಸಿ. ಹನುಮಂತಸ್ವಾಮಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಸ್ವಾಗತವನ್ನು ಕೋರಿದರು, ಡಾ. ಅರುಣ್ ಕುಮಾರ್ ಪಿ., ವಿಜ್ಞಾನಿ (ಕೃಷಿ ವಿಸ್ತರಣೆ) , ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಇವರು ನಿರೂಪಣೆ ಮಾಡಿದರು, ಡಾ. ಬಸವರಾಜ್, ಎಂ., ವಿಜ್ಞಾನಿ (ಬೇಸಾಯ ಶಾಸ್ತ್ರ), ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಇವರು ವಂದನಾರ್ಪಣೆಯನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ 150 ರೈತರು ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಂಡರು.