ಶಿವಮೊಗ್ಗ, ಜನವರಿ 15, : ಬಾಲ್ಯವಿವಾಹವನ್ನು ನೂರಕ್ಕೆ ನೂರರಷ್ಟು ತಡೆಯಬೇಕು. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಕ್ರಿಯವಾಗಿ ತಮ್ಮ ಪಾತ್ರ ವಹಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಜಿಲ್ಲೆ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿμÉೀಧ ಕಾಯ್ದೆಯ ಅನುμÁ್ಠನ ಹಾಗೂ ಕ್ರಮಬದ್ಧ ಕಾರ್ಯವಿಧಾನ ಕುರಿತಂತೆ ಭಾಗಿದಾರ ಇಲಾಖೆಗಳ ಬಾಲ್ಯ ವಿವಾಹ ನಿμÉೀಧ ಅಧಿಕಾರಿಗಳಿಗೆ ಇಂದು ಆಲ್ಕೊಳ ಚೈತನ್ಯ ಸಂಸ್ಥೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಯನ್ನು ಹೋಗಲಾಡಿಸಲು ಎಲ್ಲಾ ಇಲಾಖೆಗಳು ಕೈಜೋಡಿಸಬೇಕು. ಹಾಗೂ ಇದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಕೂಡ ಆಗಿದೆ ಎಂದು ತಿಳಿಸಿದ ಅವರು ಬಾಲ್ಯ ವಿವಾಹಗಳು ಗಮನಕ್ಕೆ ಬಂದರೂ ನಿರ್ಲಕ್ಷ್ಯ ವಹಿಸುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿಗಳಾದ ಚಂದ್ರಪ್ಪ ಮಾತನಾಡಿ, ಜಿಲ್ಲೆಯಲ್ಲಿ ದೂರು ದಾಖಲಾದ ಎಲ್ಲಾ ಪ್ರಕರಣಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. 2022 ರಿಂದ 2023 ರ ಜನವರಿವರೆಗೆ ಜಿಲ್ಲೆಯಲ್ಲಿ ಒಟ್ಟು 97 ಬಾಲ್ಯ ವಿವಾಹದ ದೂರುಗಳು ದಾಖಲಾಗಿದ್ದು ಬಾಲ್ಯ ವಿವಾಹ ನಡೆದ 42 ಪ್ರಕರಣಗಳಿಗೆ ಎಫ್‍ಐಆರ್ ದಾಖಲಿಸಲಾಗಿದೆ. ಶೂನ್ಯ ಬಾಲ್ಯ ವಿವಾಹ ಜಿಲ್ಲೆಯನ್ನಾಗಿ ಮಾಡಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದ್ದು, ಬಾಲ್ಯ ವಿವಾಹ ನಡೆಸಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೋವಿಡ್‍ನಿಂದ ಪೆÇೀಷಕರನ್ನು ಕಳೆದುಕೊಂಡ ಮಕ್ಕಳಿಗೆ ಬ್ಯಾಗ್‍ಗಳನ್ನು ವಿತರಿಸಲಾಯಿತು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕ್ಯಾಲೆಂಡರ್ ಹಾಗೂ ಬಾಲ್ಯವಿವಾಹ ನಿμÉೀಧದ ಬಗ್ಗೆ ಜನರಲ್ಲಿ ಜಾಗೃತಿ ಮಾಡಿಸುವ ಪೆÇೀಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೇಖಾ ಜಿ.ಎಂ. ಹಾಗೂ ಮಕ್ಕಳ ಕಲ್ಯಾಣ ಸಮಿತಿಯಿ ಸದಸ್ಯರಾದ ಶೀಲಾ ಸುರೇಶ್ ಇವರುಗ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹ ಕುರಿತಾದ ವಾಸ್ತವ ಸ್ಥಿತಿಗತಿ ಹಾಗೂ ಬಾಲ್ಯ ವಿವಾಹ ನಿμÉೀಧ ಅಧಿಕಾರಿಗಳ ಪಾತ್ರದ ಕುರಿತು ಉಪನ್ಯಾಸ ನೀಡಿದರು. ಚೈತನ್ಯ ಸಂಸ್ಥೆಯ ಫಾದರ್ ರೋಷನ್ ಪಿಂಟೊ ಹಾಜರಿದ್ದರು.
ಕಂದಾಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೆÇಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಇತರೆ ಇಲಾಖೆಯ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

error: Content is protected !!