ಶಿವಮೊಗ್ಗ, ನವೆಂಬರ್ 25 : ಉದ್ಯೋಗ ವಿನಿಮಯ ಕಚೇರಿಯು ನ.29 ರಂದು ಬೆಳಿಗ್ಗೆ 10.00ಕ್ಕೆ ನಗರದ ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ 2ನೇ ಕ್ರಾಸ್‍ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲಮೋ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255293/ 8762778408/ 9535312531 ಗಳನ್ನು ಸಂಪರ್ಕಿಸುವುದು.

error: Content is protected !!