ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ (ಕೆಯುಡಬ್ಲ್ಯೂಜೆ) ಶಿವಮೊಗ್ಗ ಜಿಲ್ಲಾ ಶಾಖೆ ತೀವ್ರವಾಗಿ ಖಂಡಿಸುತ್ತದೆ.
ಶಿವಮೊಗ್ಗ: ಕೋಲಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವರದಿ ಮಾಡಲು ಹೋಗಿದ್ದ ವರದಿಗಾರರ ಮೇಲೆ ಮಾಜಿ ಸ್ಪೀಕರ್ ಕೆ.ಅರ್.ರಮೇಶ್ ಕುಮಾರ್ ಹಲ್ಲೆ ಮಾಡಿರುವುದನ್ನು ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ (ಕೆಯುಡಬ್ಲ್ಯೂಜೆ) ಶಿವಮೊಗ್ಗ ಜಿಲ್ಲಾ ಶಾಖೆ ತೀವ್ರವಾಗಿ ಖಂಡಿಸುತ್ತದೆ. ಕೆ.ಅರ್ ರಮೇಶ್ ಕುಮಾರವರು ಜನಪ್ರತಿನಿಧಿಯಾಗಿದ್ದು ತಮ್ಮ ಸ್ಥಾನದ ಜವಾಬ್ದಾರಿ ಮರೆತು ಪರ್ತಕರ್ತರ ಮೇಲೆ ಹಲ್ಲೆ ಮಾಡಿರುವುದು ಪ್ರಜಾಫ್ರಭುತ್ವ ವಿರೋಧಿ ನಡೆಯಾಗಿದೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ.
ಪತ್ರಕರ್ತರ ಮೇಲಿನ ಇಂತಹ ಹಲ್ಲೆ ಮತ್ತು ದೌರ್ಜನ್ಯಗಳನ್ನು ಸಂಘವು ಸಹಿಸುವುದಿಲ್ಲ ಕೂಡಲೇ ರಮೇಶ್ ಕುಮಾರ್ ರವರು ಕ್ಷಮೆಯನ್ನು ಕೇಳಬೇಕು ಇಲ್ಲವಾದಲ್ಲಿ ಸರ್ಕಾರ ರಮೇಶ್ ಕುಮಾರ್ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್‍ವಿ.ಟಿ, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್ ಆಗ್ರಸಿದ್ದಾರೆ
ಶಿವಮೊಗ್ಗ ಕಾರ್ಯನಿರತ ಪರ್ತಕರ್ತರ ಸಂಘ ಶಿವಮೊಗ್ಗ ಶಾಖೆಯಿಂದ ಪರ್ತಕರ್ತರ ಮೇಲೆ ರಮೇಶ್ ಕುಮಾರ್ ಹಲ್ಲೆ ಖಂಡಿಸಿ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು