ಶಿವಮೊಗ್ಗ, ಮಾರ್ಚ್ 25 : 2020-21ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ ಅಟಲ್ ನಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ ಡಾ|| ಬಿ ಆರ್ ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2020-21ನೇ ಸಾಲಿಗೆ ಆರನೇ ತರಗತಿ ವಿದ್ಯಾರ್ಥಿಗಳಿಗೆ ದಾಖಲಾತಿ ನೀಡಲು ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ರವರು ದಿನಾಂಕ 24-02-2021ರಂದು ನಡೆಸಲಾಗಿದೆ.
ಈ ಪರೀಕ್ಷೆಯ ಫಲಿತಾಂಶ ಹಾಗೂ ಸೀಟು ಹಂಚಿಕೆ ಕುರಿತು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದ್ದು, ಫೆಬ್ರವರಿ 24 ರಂದು ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳ ಪ್ರವೇಶಾತಿ ಪರೀಕ್ಷೆಯ ಫಲಿತಾಂಶವನ್ನು ಮಾರ್ಚ್ 23ರ ಸಂಜೆ 04 ಗಂಟೆಗೆ, ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದು (ಆದ್ಯತಾ ಕ್ರಮದಲ್ಲಿ) ಶಾಲೆಗಳನ್ನು ದಾಖಲಿಸಲು, ಬದಲಾಯಿಸಲು, ಹೊಸದಾಗಿ ಸೇರಿಸಲು ಮಾರ್ಚ್ 24ರ ಬೆಳಿಗ್ಗೆ 11:00 ರಿಂದ ಮಾರ್ಚ್ 31 ರ ಸಂಜೆ 04 ಗಂಟೆಯವರೆಗೆ, ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏಪ್ರಿಲ್ 03ರ ಬೆಳಿಗ್ಗೆ 11 ಗಂಟೆಗೆ ಮತ್ತು ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳು ಏಪ್ರಿಲ್ 05ರಿಂದ ಏಪ್ರಿಲ್ 10ರ ವರೆಗೆ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು ಅಥವಾ ಕೆಇಎ ವೆಬ್‍ಸೈಟ್ hಣಣಠಿs://ಛಿeಣoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ಞeಚಿ/ಞಡಿeis ನೋಡಬಹುದು ಎಂದು ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಪ್ರವೇಶ ಪರೀಕ್ಷಾಧಿಕಾರಿಗಳು / ಉಪನಿರ್ದೇಶಕರು ತಿಳಿಸಿದ್ದಾರೆ.