ಶಿವಮೊಗ್ಗ, ಜನವರಿ 18 : ಶಿವಮೊಗ್ಗ- ಭದ್ರಾವತಿ ನಡುವೆ ಬರು ಎಲ್‍ಸಿ ನಂ.34ರಲ್ಲಿ ರೈಲ್ವೇ ಓವರ್‍ಬ್ರಿಡ್ಜ್ ಕಾಮಗಾರಿ ನಡೆಯುತ್ತಿರುವುದರಿಂದ ಸುಗಮ ಸಂಚಾರದ ದೃಷ್ಠಿಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಚಾಲಕರು/ಪ್ರಯಾಣಿಕರು ತಾತ್ಕಾಲಿಕ ಅವಧಿಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸೂಚಿಸಲಾಗಿರುವ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.
ಪರ್ಯಾಯ ಮಾರ್ಗಗಳು : ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ವಾಹನಗಳು ಶಿವಮೊಗ್ಗ ಬಿಳಿಕಿ ಕ್ರಾಸ್-ಕೃಷ್ಣಪ್ಪ ವೃತ್ತದ ಮುಖಾಂತರ ಭದ್ರಾವತಿ ತಲುವುದು.

ಭದ್ರಾವತಿಯಿಂದ ಶಿವಮೊಗ್ಗ ಕಡೆಗೆ ಸಂಚರಿಸುವ ವಾಹನಗಳು ಅಂಡರ್‍ಬ್ರಿಡ್ಜ್- ಉಂಬ್ಳೇಬೈಲ್ ರಸ್ತೆ ಕೃಷ್ಣಪ್ಪ ವೃತ್ತ- ರಾಷ್ಟ್ರೀಯ ಹೆದ್ದಾರಿ-69ರ ಮುಖಾಂತರ ಶಿವಮೊಗ್ಗಕ್ಕೆ ಸಂಚರಿಸಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಆಯ್ಕೆ ಪಟ್ಟಿ ಪ್ರಕಟ
ಶಿವಮೊಗ್ಗ, ಜನವರಿ 18 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿ.ಮ.ಆ.ಸ) ತರಬೇತಿಗಾಗಿ ಅರ್ಜಿ ಸಲ್ಲಿಸಿದ ಹಾಗೂ ದಾಖಲಾತಿ ಪರಿಶೀಲಿಸಿದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿನ ಸೂಚನಾ ಫಲಕದಲಗಲಿ ಪ್ರಕಟಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ದಿ: 21/01/2022 ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!