ಶಿವಮೊಗ್ಗ, ಮೇ -31, : ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಬಾಳಗಡಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2023-24ನೇ ಸಾಲಿನಲ್ಲಿ ಆರಂಭಗೊಂಡಿರುವ ಫುಡ್ ಪ್ರೋಸೆಸಿಂಗ್ ಮತ್ತು ಪ್ರಿಸರ್ವೇಶನ್ ಇಂಜಿನಿಯರಿಂಗ್, ಟ್ರಾವೆಲ್ಸ್ ಮತ್ತು ಟೂರಿಸಂ ಇಂಜಿನಿಯರಿಂಗ್ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ./ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನೇರವಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://dtek.karnataka.gov.in ಅಥವಾ ಪ್ರಾಚಾರ್ಯರ ಮೊ.ಸಂ.: 7975792426 ನ್ನು ಸಂಪರ್ಕಿಸುವಂತೆ ಕೊಪ್ಪ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!