ಶಿವಮೊಗ್ಗ, ಜನವರಿ 07 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಚೇರಿ ವತಿಯಿಂದ ಇಂದು ನಿರುದ್ಯೋಗ ಯುವಕ/ಯುವತಿಯರಿಗೆ ಸ್ವಂತ ಉದ್ದಿಮೆ ಸ್ಥಾಪಿಸುವ ಬಗ್ಗೆ ಪಿಎಂಇಜಿಪಿ ಯೋಜನೆಯಡಿ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಗಣೇಶ್ ಪಿಎಂಇಜಿಪಿ ಯೋಜನೆಯ ನಿಯಮಾವಳಿಗಳನ್ನು ವಿವರಿಸಿದರು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಂತ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಸೀತಾರಾಂ ಭಟ್ ತರಬೇತಿ ಕುರಿತು ತಿಳಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ಯತೀಶ್ ಬ್ಯಾಂಕಿನ ಸಾಲ ಮಂಜೂರಾತಿ, ಮರುಪಾವತಿಗಳಿಗೆ ಸಂಬಂಧಿಸಿದ ಅಂಶಗಳ ಬಗ್ಗೆ ವಿವರಿಸಿದರು. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಸಿ.ಮಂಜುಳಾದೇವಿ ಸ್ವಾಗತಿಸಿದರು.