ಶಿವಮೊಗ್ಗ, ಜನವರಿ 03 :ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಅರ್ಹ ರೈತರು(ಸಣ್ಣ, ಅತಿ ಸಣ್ಣ, ಮಧ್ಯಮ, ದೊಡ್ಡ ರೈತರು) ಯೋಜನೆಯ ಲಾಭ ಪಡೆದುಕೊಳ್ಳಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ಈ ಯೋಜನೆಯ ಮಾರ್ಗಸೂಚಿಯಂತೆ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ ರೂ.6000/- ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೂ.2000 ರಂತೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ.
ಈಗಾಗಲೇ ಕೇಂದ್ರ ಸರ್ಕಾರದಿಂದ ಹಲವು ಕಂತುಗಳು ಬಿಡುಗಡೆಯಾಗಿದ್ದು, ತಮ್ಮ ಕೊನೆಯ ಕಂತು ಪಾವತಿಯಾಗದೇ ‘payment stopped by state on request ‘ ಎಂಬ ಸಂದೇಶ ಬಂದಿದ್ದಲ್ಲಿ ಕೂಡಲೇ ತಮ್ಮ ಸೂಕ್ತ ದಾಖಲೆಗಳೊಂದಿಗೆ (ಜಮೀನು ಖಾತೆ, ಪಹಣಿ, ಸರ್ವೇ ನಂ, ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ)ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರವನ್ನು ಕೂಡಲೇ ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.