News Next

ಕೃಷಿ ಇಲಾಖೆಯು 2020-21 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಹಾಗೂ ಬೆಳೆಗಳ ಘೋಷಣೆ ಬಗ್ಗೆ ಸರ್ಕಾರದ ಅಧಿಸೂಚನೆ ಹೊರಡಿಸಿದ್ದು, ರೈತರು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ (ಮಳೆ ಆಶ್ರಿತ) ಹಾಗೂ ಜೋಳ (ಮಳೆ ಆಶ್ರಿತ) ಮತ್ತು ಗ್ರಾಮ ಪಂಚಾಯತಿ ಮಟ್ಟಕ್ಕೆ ಭತ್ತ (ನೀರಾವರಿ/ ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ ಮಳೆ ಆಶ್ರಿತ) ಬೆಳೆಗಳು ಆಯ್ಕೆ ಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‍ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ, ಸಂಸ್ಥೆ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಮುಸುಕಿನ ಜೋಳ (ನೀರಾವರಿ/ ಮಳೆಆಶ್ರಿತ) ದಿನಾಂಕ: 31.07.2020, ಭತ್ತ (ನೀರಾವರಿ/ಮಳೆಆಶ್ರಿತ) ದಿನಾಂಕ:14.08.2020, ಜೋಳ (ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ದಿನಾಂಕ:14.08.2020 ಅಂತಿಮ ದಿನಾಂಕಗಳಾಗಿರುತ್ತದೆ ಎಂದವರು ತಿಳಿಸಿದ್ದಾರೆ.
ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗಾಗಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆಗಾಗಿ ನೋಂದಾಯಿಸಿಕೊಳ್ಳುವಂತೆ ತಿಳಿಸಿರುವ ಅವರು, ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಲು ಸಹ ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು, ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡÀಲಾಗುವುದು. ಬೆಳೆ ಸಾಲ ಪಡೆಯದ ರೈತರು ತಮಗೆ ಹತ್ತಿರವಿರುವ ಬ್ಯಾಂಕ್ / ಆರ್ಥಿಕ ಸಂಸ್ಥೆಗಳು / ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಅSಅ ಕೇಂದ್ರಗಳು) ನೋಂದಾಯಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.
ರೈತರು ಈ ಕುರಿತ ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹಾಗೂ ಸಂರಕ್ಷಣೆ ವೆಬ್ ಸೈಟ್‍ನಲ್ಲಿಯೂ (http://samrkshane.karnataka.gov.in) ಸಹ ಮಾಹಿತಿ ಪಡೆಯಬಹುದಾಗಿದೆ ಎಂದವರು ತಿಳಿಸಿದ್ದಾರೆ.

error: Content is protected !!