ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾಧ್ಯಂತ ರೋಟರಿ ಹಾಗೂ ಇತರ ಸಂಘ ಸಂಸ್ಥೆಗಳು ರಕ್ತದಾನ ಶಿಬಿರವನ್ನು ಆಯೋಜಿಸಿದ್ದವು
ಕಾಲೇಜು ವಿದ್ಯಾರ್ಥಿಗಳನ್ನು ಒಳಗೊಂಡಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು
ಪ್ರತಿಯೊಂದು ಹನಿ ರಕ್ತವು ಒಬ್ಬ ವ್ಯಕ್ತಿಯ ಜೀವನವನ್ನು ಉಳಿಸುತ್ತದೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತದಾನ ಮಾಡುವುದರ ಮೂಲಕ ಮಾದರಿಯಾಗಿ ಆಚರಿಸಲಾಯಿತು
ಸುಮಿತ್ರಾ ರಂಗನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಕರಿ ಪ್ರಪಂಚಕ್ಕೆ ಮಾದರಿಯಾಗಿದೆ ಅವರ ಹುಟ್ಟುಹಬ್ಬವನ್ನು ರಕ್ತದಾನ ಮಾಡುವುದರ ಮೂಲಕ ಆಚರಿಸಲಾಗುತ್ತಿದ್ದು ರಕ್ತದಾನ ಮಹಾದಾನ, ರಕ್ತದಾನ ಮಾಡುವುದರಿಂದ ಮತ್ತೆ ದೇಹಕ್ಕೆ ಪುನಶ್ಚೇತನ ಬರುತ್ತದೆ ಎನ್ನುವ ಅರಿವನ್ನು ಜನತೆಗೆ ನೀಡುತ್ತಿದ್ದೇವೆ ಎಂದು ತಿಳಿಸಿದರು
ಸುಮಂತ್ ಜೈನ್ ರಕ್ರದಾನ ಮಾಡಿ ಮಾತನಾಡಿ
ಪ್ರಧಾನಿ ನರೇಂದ್ರ ಮೋದಿಯವರು ನಮಗೆಲ್ಲ ಆದರ್ಶ ,ರೋಟರಿ ರತ್ತ ನಿಧಿ ಕೇಂದ್ರದ ಸಹಕಾರದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ರಕ್ತದಾನ ಮಾಡುವುದರ ಮೂಲಕ ಮಾದರಿಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು
ರಕ್ರದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅಮೃತಾ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾಧ್ಯಂತ ನಮ್ಮ ರೋಟರಿ ರಕ್ತನಿಧಿ ಕೇಂದ್ರದ ಸಹಕಾರದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಗುತ್ತಿದ್ದು ಜಿಲ್ಲೆಯಲ್ಲಿ ಜನ ನಿರೀಕ್ಷೆಗೂ ಮೀರಿ ಶಿಬಿರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ
ಜನತೆಗೆ ರಕ್ತದಾನದಲ್ಲಿ ತೊಡಗಿಕೊಳ್ಳುವಂತೆ ಮತ್ತು ಅದರ ಮಹತ್ವವನ್ನು ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು