ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೊ. ಜಗದೀಶ್.ಎಸ್ ಅವರು ಕುವೆಂಪು ವಿಶ್ವವಿದ್ಯಾಲಯದ ಮಟ್ಟದಲ್ಲಿ 2022-23ನೇ ಸಾಲಿನ ಅತ್ತ್ಯುತ್ತಮ ಎನ್‌ಎಸ್‌ಎಸ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜುಲೈ 6 ರಂದು ಕುವೆಂಪು ವಿಶ್ವ ವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯ ಮಟ್ಟದಲ್ಲಿ ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ವೈಖರಿ ಹಾಗೂ ಸೇವಾ ಚಟುವಟಿಕೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. 202-23ನೇ ಸಾಲಿನಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೊ.ಜಗದೀಶ್ ಎಸ್. ಅವರು ಉತ್ತಮವಾಗಿ ಎನ್‌ಎಸ್‌ಎಸ್ ಚಟುವಟಿಕೆಗಳನ್ನು ಆಯೋಜಿಸಿದ್ದರು.
ಎಟಿಎನ್‌ಸಿಸಿ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರೊ. ಕೆ.ಎಂ.ನಾಗರಾಜು, ಅಧ್ಯಾಪಕ ವೃಂದ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, ರೆಡ್‌ಕ್ರಾಸ್‌ನ ಜಿ.ವಿಜಯ್‌ಕುಮಾರ್ ಅವರ ಸಹಕಾರಕ್ಕೆ ಪ್ರೊ. ಜಗದೀಶ್ ಎಸ್. ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿಗೆ 2022-23ನೇ ಸಾಲಿನ ಕುವೆಂಪು ವಿಶ್ವ ವಿದ್ಯಾಲಯ ಮಟ್ಟದ ಅತ್ತ್ಯುತ್ತಮ ಎನ್‌ಎಸ್‌ಎಸ್ ಘಟಕ ಪ್ರಶಸ್ತಿ ಲಭಿಸಿದೆ.
