ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಫೆಬ್ರವರಿ 10ರಂದು ಆಚರಿಸಲಿರುವ ರಾಷ್ಟ್ರೀಯ ಜಂತುಹುಳು ದಿನಾಚರಣೆಯ ಅಂಗವಾಗಿ ಬಿಡುಗಡೆಗೊಳಿಸಿದ ಬಿತ್ತಿಪತ್ರವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ, ಆರ್.ಸಿ.ಹೆಚ್.ಅಧಿಕಾರಿ ಡಾ|| ನಾಗರಾಜ್ನಾಯ್ಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಎಸ್.ಪಂಚಾಳ ಮುಂತಾದವರು ಉಪಸ್ಥಿತರಿದ್ದರು.