ಪೌರಕಾರ್ಮಿಕರು ಇನ್ನು ಮುಂದೆ ಸರಕಾರಿ ನೌಕರರು

ರಾಜ್ಯದ ಮಹಾನಗರಪಾಲಿಕೆ, ನಗರಪಾಲಿಕೆ,ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ17000-28980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ. ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿರುವುದಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ ಉಪಮೆಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿರುತ್ತಾರೆ.

ಕೆ. ವಿ. ಅಣ್ಣಪ್ಪ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರು.

error: Content is protected !!