ಶಿವಮೊಗ್ಗ, ಏಪ್ರಿಲ್-13 : 2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ ರೂ. 2040/- ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 2060/- ನಿಗಧಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ತಾಲೂಕು ಎ.ಪಿ.ಎಂ.ಸಿ. ಯಾರ್ಡ್‍ಗಳಲ್ಲಿ ತೆರೆಯಲಾಗಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!