
ಮಕ್ಕಳ ವೈದ್ಯ ಸರ್ಜಿ ಫೌಂಡೇಷನ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸರ್ಜಿ ಡಿಸೆಂಬರ್ 4ರಂದು ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಡಾ. ಧನಂಜಯ ಸರ್ಜಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ವೈದ್ಯಕೀಯ ಮತ್ತು ಸೇವಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಡಾ. ಧನಂಜಯ ಸರ್ಜಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಬಿಜೆಪಿ ಪಕ್ಷದ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಡಾ. ಧನಂಜಯ ಸರ್ಜಿ ಅವರು ಸಿದ್ಧತೆ ನಡೆಸಿದ್ದರು. ಇತ್ತೀಚಿನ ದಿನಗಳಲ್ಲಿ ಹೆಚ್ಚು ಸಕ್ರಿಯರಾಗಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಅವರು ಜನಪರ – ಜೀವಪರ ಘೋಷಣೆಯೊಂದಿಗೆ ಹೆಚ್ಚು ಸಕ್ರಿಯರಾಗಿದ್ದರು.
ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಪ್ರಮುಖ ರಾಜಕೀಯ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತಯಾರಿಯಲ್ಲಿದ್ದರು ಎಂದು ಊಹಿಸಲಾಗಿತ್ತು. ಇದೀಗ ಬಿಜೆಪಿ ಪಕ್ಷ ಸೇರಲು ತೀರ್ಮಾನಿಸಿ ಭಾನುವಾರ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.