ಶಿವಮೊಗ್ಗ, ನವೆಂಬರ್ 08 : ದಿ:27/08/2021ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯನ್ನು ವಿಶೇಷ ಪರಿಷ್ಕರಣೆ-2022ರ ಅನುಷ್ಟಾನದ ವಿಚಾರದಲ್ಲಿ ಕರಡು ಮತದಾರರ ಪಟ್ಟಿಯನ್ನು ನ. 11ರಂದು ಜಿಲ್ಲೆಯಲ್ಲಿ ಪ್ರಚುರ ಪಡಿಸಿದೆ. ಈ ಸಂಬಂಧ ಜಿಲ್ಲೆಯ ಎಲ್ಲಾ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಹೆಸರುಗಳು ಸೇರ್ಪಡೆಗೊಂಡಿರುವ ಬಗ್ಗೆ ಪರಿಶೀಲಿಸಿಕೊಂಡು, ಈ ಮತದಾರರ ಕರಡು ಪಟ್ಟಿಯ ಕುರಿತು ಆಕ್ಷೇಪಣೆಗಳಿದ್ದಲ್ಲಿ ಡಿ. 08 ರೊಳಗಾಗಿ ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಗೆ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರ